ಬ್ರಿಟನ್ ನಲ್ಲಿ 'ಪದ್ಮಾವತಿ' ಬಿಡುಗಡೆಗೆ ಬ್ರಿಟಿಷ್ ಸೆನ್ಸಾರ್ ಮಂಡಳಿ ಅಸ್ತು
'ಪದ್ಮಾವತಿ' ಚಿತ್ರ ವಿವಾದದಿಂದಾಗಿ ಭಾರತದಲ್ಲಿ ಚಲನಚಿತ್ರದ ಬಿಡುಗಡೆ ಮುಂದೂಡಿದ್ದರೂ, ಬ್ರಿಟಿಷ್ ಬೋರ್ಡ್ ಆಫ್ ಫಿಲ್ಮ್ ಕ್ಲಾಸಿಫಿಕೇಷನ್ (ಬಿಬಿಎಫ್ ಸಿ) ಬ್ರಿಟನ್ ನಲ್ಲಿ ಚಿತ್ರ ಬಿಡುಗಡೆಗೆ ಅನುಮತಿ ನೀಡಿದೆ.

Published On :
ಲಂದನ್: 'ಪದ್ಮಾವತಿ' ಚಿತ್ರ ವಿವಾದದಿಂದಾಗಿ ಭಾರತದಲ್ಲಿ ಚಲನಚಿತ್ರದ ಬಿಡುಗಡೆ ಮುಂದೂಡಿದ್ದರೂ, ಬ್ರಿಟಿಷ್ ಬೋರ್ಡ್ ಆಫ್ ಫಿಲ್ಮ್ ಕ್ಲಾಸಿಫಿಕೇಷನ್ (ಬಿಬಿಎಫ್ ಸಿ) ಬ್ರಿಟನ್ ನಲ್ಲಿ ಚಿತ್ರ ಬಿಡುಗಡೆಗೆ ಅನುಮತಿ ನೀಡಿದೆ. ಬಿಬಿಎಫ್ ಸಿ ಭಾರತೀಯ ಚಿತ್ರಕ್ಕೆ 12A ಸರ್ಟಿಫಿಕೇಟ್ ನೀಡಿದೆ. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಪದ್ಮಾವತಿ' ಬ್ರಿಟನ್ ನಲ್ಲಿ ಡಿಸೆಂಬರ್ 1 ರಂದು ಬಿಡುಗಡೆಯಾಗಲು ಅಲ್ಲಿನ ಸೆನ್ಸಾರ್ ಸಮಿತಿ ಅನುಮೋದನೆ ನೀಡಿದೆ.
ಬಿಬಿಎಫ್ ಸಿ ಜಾಲತಾಣದ ಮಾಹಿತಿಯಂತೆ 'ಪದ್ಮಾವತಿ' ಚಿತ್ರದ ಯಾವ ದೃಶ್ಯಕ್ಕೂ ಕತ್ತರಿ ಹಾಕದೆ ಪೂರ್ಣ ಚಿತ್ರವನ್ನು ಪ್ರದರ್ಶಿಸಲು ಆನುಮತಿ ದೊರಕಿದೆ.
ಇದೇ ವೇಳೆ ಭಾರತದಲ್ಲಿ ಡಿ.1ರಂದು ಬಿಡುಗಡೆಗೊಳ್ಳಬೇಕಿದ್ದ 'ಪದ್ಮಾವತಿ' ಚಿತ್ರಕ್ಕೆ ಸಿಬಿಎಫ್ಸಿ ಇದುವರೆಗೆ ಸೆನ್ಸಾರ್ ಸರ್ಟಿಫಿಕೇಟ್ ನೀಡಿಲ್ಲ. ಸೆನ್ಸಾರ್ ಮಂಡಳಿ ಸದಸ್ಯರು ಈ ಚಿತ್ರವನ್ನಿನ್ನೂ ವಿಕ್ಷಿಸಿಲ್ಲ, ಇನ್ನು ಒಂದು ವೇಳೆ ಸೆನ್ಸಾರ್ ಸರ್ಟಿಫಿಕೇಟ್ ನೀಡಿದರೂ ಸಹ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ರಜಪೂತ್ ಸಂಘಟನೆಗಳು ಹೇಳಿದೆ.
ಹೀಗಿದ್ದರೂ , ವಿಯಾಕಾನ್ 18 ಮೂಲದ ಪ್ರಕಾರ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ (ಸಿಬಿಎಫ್ ಸಿ) ನಿಂದ ಅನುಮತಿ ದೊರಕದೆ ಜಗತ್ತಿನ ಯಾವ ಭಾಗದಲ್ಲಿಯೂ ಚಿತ್ರ ಪ್ರದರ್ಶಿಸಲಾಗುವುದಿಲ್ಲ ಎಂದು ಹೇಳಿದೆ.
ಏತನ್ಮದ್ಯೆ 'ಪದ್ಮಾವತಿ' ಚಿತ್ರದ ವಿವಾದ ಕುರಿತಂತೆ ಮನವಿಯನ್ನು ಆಲಿಸಲು ಒಪ್ಪಿರುವ ಸುಪ್ರೀಂ ಕೋರ್ಟ್ ನ.28ರಂದು ಈ ಸಂಬಂಧ ವಿಚಾರಣೆ ಕೈಗೆತ್ತಿಕೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬ್ರಿಟನ್UKSanjay Leela Bhansaliಸಂಜಯ್ ಲೀಲಾ ಬನ್ಸಾಲಿPadmavatiಪದ್ಮಾವತಿBritish Board Of Film Classification (BBFC)ಬ್ರಿಟಿಷ್ ಬೋರ್ಡ್ ಆಫ್ ಫಿಲ್ಮ್ ಕ್ಲಾಸಿಫಿಕೇಷನ್ (ಬಿಬಿಎಫ್ ಸಿ)
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


