ಊಟಿಯಲ್ಲಿ ಹಿಂದಿ ಚಿತ್ರದ ಚಿತ್ರೀಕರಣದಲ್ಲಿ ಪ್ರಿಯಾಮಣಿ ಬಿಜಿ
ರಾಷ್ಟ್ರ ಪ್ರಶಸ್ತಿ ವಿಜೇತೆ ಪ್ರಿಯಾಮಣಿ ಅವರು ಮದುವೆ ನಂತರ ಸದ್ದಿಲ್ಲದೆಯೇ ಊಟಿಯಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ...

Published On :
ರಾಷ್ಟ್ರ ಪ್ರಶಸ್ತಿ ವಿಜೇತೆ ಪ್ರಿಯಾಮಣಿ ಅವರು ಮದುವೆ ನಂತರ ಸದ್ದಿಲ್ಲದೆಯೇ ಊಟಿಯಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.
ಹಿಂದಿ ಚಿತ್ರವೊಂದರಲ್ಲಿ ಪ್ರಿಯಾಮಣಿ ಅಭಿನಯಿಸುತ್ತಿದ್ದು ಆ ಚಿತ್ರದ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಬಹುವರ್ಷಗಳ ಬಳಿಕ ಅವರು ಬಾಲಿವುಡ್ ನತ್ತ ಗಮನ ಹರಿಸಿದ್ದಾರೆ. ಇನ್ನು ಸೆಪ್ಟೆಂಬರ್ ನಿಂದಲೇ ಆ ಚಿತ್ರದ ಶೂಟಿಂಗ್ ನಲ್ಲಿ ಪ್ರಿಯಾಮಣಿ ಬಿಜಿಯಾಗಿದ್ದರಂತೆ. ಚಿತ್ರದ ಚಿತ್ರೀಕರಣ ಅಕ್ಟೋಬರ್ 15ಕ್ಕೆ ಮುಕ್ತಾಯವಾಗಲಿದೆ.
2010ರಲ್ಲಿ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ರಾವಣ್ ಚಿತ್ರದ ಮೂಲಕ ಬಾಲಿವುಡ್ ಗೂ ಕಾಲಿಟ್ಟಿದ್ದ ಪ್ರಿಯಾಮಣಿ ನಂತರ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ರಕ್ತ ಚರಿತ್ರ 2 ಹಿಂದಿ ಚಿತ್ರದಲ್ಲೂ ಬಣ್ಣ ಹಚ್ಚಿದ್ದರು.
ನಾಲ್ಕು ವರ್ಷಗಳ ಗ್ಯಾಪ್ ನಂತರ ಪ್ರಿಯಾಮಣಿ ನಂತರ ಬಾಲಿವುಡ್ ಚಿತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಆ ಚಿತ್ರ ಯಾವುದು? ಅವರ ಪಾತ್ರ ಹೇಗಿದೆ? ಇತ್ಯಾದಿ ಪ್ರಶ್ನೆಗಳು ಇದೀಗ ಅಭಿಮಾನಿಗಳ ತಲೆಯಲ್ಲಿ ಹರಿದಾಡುತ್ತಿವೆ.
ಆಗಸ್ಟ್ 24ರಂದು ಮುಸ್ತಾಫಾ ರಾಜ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಿಯಾಮಣಿ ಅವರ ಹೊಸ ಸಿನಿಮಾಗಳ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿರಲಿಲ್ಲ. ಆದರೆ ತಾವು ಮದುವೆಯಾದರೂ ನಟಿಸುವುದನ್ನು ಬಿಡುವುದಿಲ್ಲ ಎಂದು ಪ್ರಿಯಾಮಣಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


