ದುಬಾರಿ ಸಂಭಾವನೆ: ಪ್ರಭಾಸ್ ಲಾಂಚ್ ಮಾಡಲು ಕರಣ್ ಜೋಹಾರ್ ಹಿಂದೇಟು!
ಭಾರತೀಯ ಚಿತ್ರರಂಗದ ಬ್ಲಾಕ್ ಬಸ್ಟರ್ ಬಾಹುಬಲಿ ಚಿತ್ರದ ಯಶಸ್ಸಿನ ನಂತರ ಪ್ರಭಾಸ್ ಗೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲ, ಬಾಲಿವುಡ್ ನಲ್ಲೂ ಬೇಡಿಕೆ ಸೃಷ್ಟಿಯಾಗಿತ್ತು...

Published On :
ಭಾರತೀಯ ಚಿತ್ರರಂಗದ ಬ್ಲಾಕ್ ಬಸ್ಟರ್ ಬಾಹುಬಲಿ ಚಿತ್ರದ ಯಶಸ್ಸಿನ ನಂತರ ಪ್ರಭಾಸ್ ಗೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲ, ಬಾಲಿವುಡ್ ನಲ್ಲೂ ಬೇಡಿಕೆ ಸೃಷ್ಟಿಯಾಗಿತ್ತು.
ಬಾಹುಬಲಿ ಚಿತ್ರದ ಹಿಂದಿ ಆವೃತ್ತಿಯನ್ನು ಬಿಡುಗಡೆ ಮಾಡಿದ್ದ ಕರಣ್ ಜೋಹಾರ್, ಪ್ರಭಾಸ್ ರನ್ನು ಹಿಂದಿ ಚಿತ್ರರಂಗದಲ್ಲಿ ಅದ್ಧೂರಿಯಾಗಿ ಲಾಂಚ್ ಮಾಡಬೇಕು ಎಂದುಕೊಂಡಿದ್ದರು. ಆದರೆ ಈಗ ಅವರ ಯೋಜನೆ ಕೈಗೂಡುವಂತೆ ಕಾಣುತ್ತಿಲ್ಲ.
ಇದಕ್ಕೆ ಕಾರಣ ಪ್ರಭಾಸ್ ಕೇಳಿರುವ ದುಬಾರಿ ಸಂಭಾವನೆ. ಹೌದು ಪ್ರಭಾಸ್ ಬರೋಬ್ಬರಿ 20 ಕೋಟಿ ರುಪಾಯಿ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ. ಬಾಹುಬಲಿ ಯಶಸ್ಸಿನ ನಂತರ ಪ್ರಭಾಸ್ ದಕ್ಷಿಣ ಭಾರತದಲ್ಲಿ ತಮ್ಮ ಸಂಭಾವನೆಯನ್ನು 30 ಕೋಟಿಗೆ ಏರಿಸಿಕೊಂಡಿದ್ದಾರೆ. ಆದರೆ ಅವರಿಗೆ ಬಾಲಿವುಡ್ ನಲ್ಲಿ 20 ಕೋಟಿ ಸಂಭಾವನೆ ಕೇಳುವಷ್ಟು ದೊಡ್ಡ ಮಾರುಕಟ್ಟೆ ಅವರಿಗಿಲ್ಲ. ಹೀಗಾಗಿ ಕರಣ್ ಜೋಹಾರ್ ಈ ಯೋಜನೆಯಿಂದ ಹಿಂದೆ ಸರಿದಿದ್ದಾರೆ ಎಂದು ಡಿಎನ್ಎ ಪತ್ರಿಕೆ ವರದಿ ಮಾಡಿದೆ.
ಈ ಬಗ್ಗೆ ಪ್ರಭಾಸ್ ಆಗಲಿ, ಕರಣ್ ಜೋಹಾರ್ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


