ಬಾಲಿವುಡ್

ಧೋನಿ, ಸಚಿನ್ ಬಳಿಕ ಬೆಳ್ಳಿ ಪರದೆ ಮೇಲೆ ಜೂಲನ್ ಬಯೋಪಿಕ್!

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಜೀವನಾಧಾರಿತ ಸಿನಿಮಾಗಳು ಬೆಳ್ಳಿ...

ಧೋನಿ, ಸಚಿನ್ ಬಳಿಕ ಬೆಳ್ಳಿ ಪರದೆ ಮೇಲೆ ಜೂಲನ್ ಬಯೋಪಿಕ್!
ಜೂಲನ್ ಗೋಸ್ವಾಮಿ
Published On :
ಕೋಲ್ಕತ್ತಾ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಜೀವನಾಧಾರಿತ ಸಿನಿಮಾಗಳು ಬೆಳ್ಳಿ ಪರೆದೆ ಮೇಲೆ ರಾರಾಜಿಸಿದ ನಂತರ ಇದೀಗ ಟೀಂ ಇಂಡಿಯಾದ ವೇಗಿ ಜೂಲನ್ ಗೋಸ್ವಾಮಿ ಅವರ ಜೀವನ ಚರಿತ್ರೆಯ ಸಿನಿಮಾ ನಿರ್ಮಾಣವಾಗುತ್ತಿದೆ. 
ಬಾಲಿವುಡ್ ನಲ್ಲಿ ಚಿತ್ರ ತಯಾರಾಗುತ್ತಿದ್ದು ಖ್ಯಾತ ಬಂಗಾಳಿ ನಿರ್ದೇಶಕ ಸುಶಾಂತ್ ದಾಸ್ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇನ್ನು ಚಿತ್ರಕ್ಕೆ ಚಾಕ್ದಾಗ ಎಕ್ಸ್ ಪ್ರೆಸ್ ಎಂದು ಟೈಟಲ್ ಇಡಲಾಗಿದೆ. ಜೂಲನ್ ಅವರ ತವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಿಂದ ಲಾರ್ಡ್ಸ್ ವರೆಗೆ ಅವರ ವೃತ್ತಿಜೀವನದ ಸಾಧನೆ ಕುರಿತು ಸಿನಿಮಾ ನಿರ್ಮಿಸಲಾಗುತ್ತಿದೆ. 
ಮುಂದಿನ ಏಪ್ರಿಲ್ ನಲ್ಲಿ ಚಿತ್ರ ಸೆಟ್ಟೇರಲಿದೆ. ಜೂಲನ್ ಪಾತ್ರಕ್ಕಾಗಿ ನಟಿಯ ಆಯ್ಕೆಯಲ್ಲಿ ಚಿತ್ರ ತಂಡ ತೊಡಗಿದ್ದು ಕೆಲ ಬಾಲಿವುಡ್ ನಟಿಯರನ್ನು ಪಟ್ಟಿ ಮಾಡಲಾಗುತ್ತಿದೆ ಎಂದು ಸುಶಾಂತ್ ತಿಳಿಸಿದ್ದಾರೆ. 
ಲಾರ್ಡ್ಸ್ ಮೈದಾನದಲ್ಲಿ ಇತ್ತೀಚೆಗೆ ನಡೆದ 2017ರ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ನಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲನುಭವಿಸಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.