ಗಣೇಶ ಮೂರ್ತಿ ಬಳಿ ಶೂ ಧರಿಸಿ ಫೋಟೋಗೆ ಫೋಸ್, ಬಿಗ್ಬಾಸ್ ಸ್ಪರ್ಧಿ ಹೀನಾ ಖಾನ್ ಟ್ರೋಲ್!
ಸದಾ ಒಂದಿಲ್ಲೊಂದು ಕಾರಣಕ್ಕೆ ಟ್ರೋಲ್ ಗೆ ತುತ್ತಾಗುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಹೀನಾ ಖಾನ್ ಇದೀಗ ಮತ್ತೊಮ್ಮೆ ಟ್ವೀಟರಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ...

Published On :
ಸದಾ ಒಂದಿಲ್ಲೊಂದು ಕಾರಣಕ್ಕೆ ಟ್ರೋಲ್ ಗೆ ತುತ್ತಾಗುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಹೀನಾ ಖಾನ್ ಇದೀಗ ಮತ್ತೊಮ್ಮೆ ಟ್ವೀಟರಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಹಾಟ್ ಬೆಡಗಿ ಹೀನಾ ತನ್ನ ಬಾಯ್ ಫ್ರೆಂಡ್ ರಾಕಿ ಜೈಸ್ವಾಲ್ ಜತೆ ನಾಸಿಕ್ ಗೆ ತೆರಳಿದ್ದರು. ಅಲ್ಲಿಯೇ ಕೆಲ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಅದರಲ್ಲಿ ಒಂದು ವಿಡಿಯೋದಲ್ಲಿ ಹೀನಾ ಖಾನ್ ಯಡವಟ್ಟು ಮಾಡಿಕೊಂಡಿದ್ದಾರೆ. ಶೂ ಹಾಕಿಕೊಂಡೆ ಗಣೇಶ ಮೂರ್ತಿ ಬಳಿ ನಿಂತು ಫೋಟೋ ಕ್ಲಿಕ್ಕಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಇನ್ನು ಹೀನಾ ಖಾನ್ ರನ್ನು ನೆಟಿಜನ್ ಗಳು ತರಾಟೆಗೆ ತೆಗೆದುಕೊಂಡಿದ್ದಾರೆ.
ಇದಕ್ಕೆ ಹೀನಾ ಖಾನ್ ತಿರುಗೇಟು ನೀಡಿದ್ದು ಅದೇ ಗಣೇಶನ ವಿಗ್ರಹದ ಮುಂದೆ ಚಪ್ಪಲಿ ಧರಿಸಿ ಜನರು ತಿರುಗಾಡುತ್ತಿರುವ ವಿಡಿಯೋವನ್ನು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಇಲ್ಲಿ ಸಾಕಷ್ಟು ಜನರು ತಿರುಗಾಡುತ್ತಿದ್ದಾರೆ. ಇದು ದೇವಸ್ಥಾನವಲ್ಲ ಎಂದು ಬರೆದುಕೊಂಡಿದ್ದಾರೆ.
You both shameless creatures @eyehinakhan and @JJROCKXX sharam aati h ya nahi #ganesha k aage #god k aage shoes phn k khade ho
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


