ಬಾಲಿವುಡ್

ಹೃದಯಾಘಾತದಿಂದಲೇ ನಟಿ ಶ್ರೀದೇವಿ ನಿಧನ: ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ

ಕಳೆದ ಶನಿವಾರ ರಾತ್ರಿ ನಿಧನರಾದ ಬಾಲಿವುಡ್ ಮೋಹಕ ತಾರೆ ಶ್ರೀದೇವಿ(54) ಅವರು ಹೃದಯಾಘಾತದಿಂದಲೇ ಮೃತಪಟ್ಟಿದ್ದಾರೆ....

ಹೃದಯಾಘಾತದಿಂದಲೇ ನಟಿ ಶ್ರೀದೇವಿ ನಿಧನ: ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ
ಶ್ರೀದೇವಿ
Published On :
ದುಬೈ:  ಕಳೆದ ಶನಿವಾರ ರಾತ್ರಿ ನಿಧನರಾದ ಬಾಲಿವುಡ್ ಮೋಹಕ ತಾರೆ ಶ್ರೀದೇವಿ(54) ಅವರು ಹೃದಯಾಘಾತದಿಂದಲೇ ಮೃತಪಟ್ಟಿದ್ದಾರೆ ಎಂದು ದುಬೈನ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ತಿಳಿಸಲಾಗಿದೆ.
ಇಂದು ಮಧ್ಯಾಹ್ನ 2 ಗಂಟೆಯ ವೇಳೆಗೆ ಮರಣೋತ್ತರ ಪರೀಕ್ಷೆಯ ಎಲ್ಲ ಪ್ರಕ್ರಿಯೆಗಳು ಬಹುತೇಕ ಪೂರ್ಣಗೊಂಡಿದ್ದು, ಬಹುಭಾಷಾ ನಟಿ ಶ್ರೀದೇವಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.
ದುಬೈನ ಜನರಲ್‌ ಡಿಪಾರ್ಟ್‌ಮೆಂಟ್‌ ಆಫ್‌ ಫೋರೆನ್ಸಿಕ್‌ನಲ್ಲಿ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಪಾರ್ಥಿವ ಶರೀರವನ್ನು ಪೊಲೀಸರಿಗೆ ಒಪ್ಪಿಸಿ ಕೆಲವು ದಾಖಲೆಗಳ ತಪಾಸಣೆಯ ನಂತರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು. ಆ ನಂತರ ಶ್ರೀದೇವಿ ಪಾರ್ಥಿವ ಶರೀರವನ್ನು ಭಾರತಕ್ಕೆ ಕರೆತರಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ದುಬೈ ಕಾನೂನಿನ ಪ್ರಕಾರ ಶವ ಪರೀಕ್ಷೆ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕವಷ್ಟೇ ಪಾರ್ಥಿವ ಶರೀರವನ್ನು ಕುಟುಂಬಕ್ಕೆ ನೀಡುವ ವ್ಯವಸ್ಥೆ ಇದೆ. 
ದುಬೈನಿಂದ ಶ್ರೀದೇವಿ ಪಾರ್ಥಿವ ಶರೀರವನ್ನು ಅನಿಲ್‌ ಅಂಬಾನಿ ಅವರ ಖಾಸಗಿ ವಿಮಾನದಲ್ಲಿ ಮುಂಬೈಗೆ ಕರೆತರಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಮುಂಬಯಿನಲ್ಲಿ ಅಂತ್ಯಸಂಸ್ಕಾರ ನಡೆಯಲಿದ್ದು, ಚಿತ್ರರಂಗದ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.