ಬಾಲಿವುಡ್ ನಿರ್ದೇಶಕ ರಾಜ್ ಕುಮಾರ್ ಸಂತೋಶಿ ಆಸ್ಪತ್ರೆಗೆ ದಾಖಲು
ಬಾಲಿವುಡ್ ನಿರ್ದೇಶಕ ರಾಜ್ ಕುಮಾರ್ ಸಂತೋಶಿ ಹೃದಯ ನಾಳದ ಸಮಸ್ಯೆಯಿಂದಾಗಿ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Published On :
ಮುಂಬೈ: ಬಾಲಿವುಡ್ ನಿರ್ದೇಶಕ ರಾಜ್ ಕುಮಾರ್ ಸಂತೋಶಿ ಹೃದಯ ನಾಳದ ಸಮಸ್ಯೆಯಿಂದಾಗಿ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಧ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರಿಗೆ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಎಎನ್ ಐ.ಸುದ್ದಿಸಂಸ್ಥೆ ವರದಿ ಮಾಡಿದೆ.
"ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದು ಈ ಸಮಯದಲ್ಲಿ ಹೆಚ್ಚಿನ ಮಾಹಿತಿಗಳನ್ನು ಹಂಚಿಕೊಳ್ಳಲು ನಮಗೆ ಸಾಧ್ಯವಿಲ್ಲ" ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದರು.
ಗೋವಿಂದ್ ನಿಹ್ಲಾನಿಯವರ "ಆರ್ಧ್ ಸತ್ಯ" (1982) ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದ ಸಂತೋಶಿ ’ಘಾಯಲ್’, ’ದಾಮಿನಿ’ ’ಅಂದಾಜ್ ಅಪ್ನಾ ಅಪ್ನಾ’ ದಂದತಾ ಜನಪ್ರಿಯ ಚಿತ್ರಗಳನ್ನು ಕೊಟ್ಟಿದ್ದಾರೆ.
ಹಲವು ವರ್ಷಗಳ ನಂತರ ಶಾಹೀದ್ ಕಪೂರ್ ಮತ್ತು ಇಲಿಯಾನಾ ಅಭಿನಯದ ’ಫತಾ ಪೋಸ್ಟರ್ ನಿಕ್ಲಾ ಹೀರೋ’ ಚಿತ್ರದ ಮುಖೇನ ಸಂತೋಶಿ ಮತ್ತೆ ಚಿತ್ರ ನಿರ್ದೇಶನಕ್ಕೆ ಮರಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

