ಬಾಲಿವುಡ್

ಗೋವಾದಲ್ಲಿ 'ಪದ್ಮಾವತ್' ಬಿಡುಗಡೆಗೆ ಪರಿಕ್ಕರ್ ಗ್ರೀನ್ ಸಿಗ್ನಲ್

ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ವಿವಾದಾತ್ಮಕ ಬಾಲಿವುಡ್ ಚಿತ್ರ 'ಪದ್ಮಾವತ್' ಗೆ ಸೆನ್ಸಾರ್ ಮಂಡಳಿ ಪ್ರಮಾಣಪತ್ರ...

ಗೋವಾದಲ್ಲಿ 'ಪದ್ಮಾವತ್'  ಬಿಡುಗಡೆಗೆ ಪರಿಕ್ಕರ್ ಗ್ರೀನ್ ಸಿಗ್ನಲ್
ಪದ್ಮಾವತ್ ಚಿತ್ರ ಸ್ಟಿಲ್
Published On :
ಪಣಜಿ: ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ವಿವಾದಾತ್ಮಕ ಬಾಲಿವುಡ್ ಚಿತ್ರ 'ಪದ್ಮಾವತ್' ಗೆ ಸೆನ್ಸಾರ್ ಮಂಡಳಿ ಪ್ರಮಾಣಪತ್ರ ನೀಡಿದ್ದರೆ ರಾಜ್ಯದಲ್ಲಿ ಚಿತ್ರ ಪ್ರದರ್ಶನಕ್ಕೆ ನಮ್ಯ ಅಭ್ಯಂತರ ಇಲ್ಲ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
'ಅವರ ಬಳಿ ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರ ಇದ್ದರೆ ನಮ್ಮ ಆಕ್ಷೇಪ ಇಲ್ಲ. ಆದರೆ ಚಿತ್ರ ಪ್ರದರ್ಶನದಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವುದಾದರೆ, ಆ ಕುರಿತು ಪರಿಶೀಲಿಸಲಾಗುವುದು'  ಎಂದು ಪರಿಕ್ಕರ್ ಹೇಳಿದ್ದಾರೆ.
ಕಾನೂನು ಸುವ್ಯವಸ್ಥೆ ಮತ್ತು ರಾಣಿ ಪದ್ಮಾವತಿ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಗೋವಾ ಮಹಿಳಾ ಬಿಜೆಪಿ ಘಟಕ ಸಂಜಯ್ ಲೀಲಾ ಭನ್ಸಾಲಿ ಅವರ ಚಿತ್ರ ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು.
ಗೋವಾ ಬಿಜೆಪಿ ಸೇರಿದಂತೆ ದೇಶಾದ್ಯಂತ ಪದ್ಮಾವತಿ ಚಿತ್ರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸೆನ್ಸಾರ್ ಮಂಡಳಿ ಚಿತ್ರದ ಹೆಸರು ಪದ್ಮಾವತ್ ಎಂದು ಬದಲಾವಣೆ ಮಾಡಿದ ನಂತರ ಚಿತ್ರ ಬಿಡುಗಡೆಗೆ ಅನುಮತಿ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.