ವಿವಿಧ ರಾಜ್ಯಗಳಲ್ಲಿ 'ಪದ್ಮಾವತ್'ಗೆ ನಿಷೇಧ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ನಿರ್ಮಾಪಕರು
ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ವಿವಾದಾತ್ಮಕ ಬಾಲಿವುಡ್ ಚಿತ್ರ ಪದ್ಮಾವತ್ ಬಿಡುಗಡೆಗೆ ದೇಶದ ಹಲವು ರಾಜ್ಯಗಳಲ್ಲಿ ನಿಷೇಧ....

Published On :
ನವದೆಹಲಿ: ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ವಿವಾದಾತ್ಮಕ ಬಾಲಿವುಡ್ ಚಿತ್ರ ಪದ್ಮಾವತ್ ಬಿಡುಗಡೆಗೆ ದೇಶದ ಹಲವು ರಾಜ್ಯಗಳಲ್ಲಿ ನಿಷೇಧ ಹೇರಲಾಗಿದ್ದು, ಇದನ್ನು ಪ್ರಶ್ನಿಸಿ ಚಿತ್ರ ನಿರ್ಮಾಪಕರು ಬುಧುವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಸೆನ್ಸರ್ ಮಂಡಳಿ ಅನುಮತಿ ನೀಡಿದ್ದರೂ ಸಿನಿಮಾವನ್ನು ತಡೆಯುವ ಹಕ್ಕು ಯಾವ ರಾಜ್ಯಕ್ಕೂ ಇಲ್ಲ. ತಮ್ಮ ಸಿನಿಮಾ ಎಲ್ಲಾ ರಾಜ್ಯಗಳಲ್ಲೂ ಬಿಡುಗಡೆಯಾಗುವಂತೆ ಅವಕಾಶ ನೀಡಬೇಕೆಂದು ನಿರ್ಮಾಪಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ.ಎಂ.ಖನ್ವಿಲ್ಕರ್ ಮತ್ತು ನ್ಯಾಯಮೂರ್ತಿ ಡಿವೈ ಚಂದ್ರಚೂಢ ಅವರನ್ನೊಳಗೊಂಡ ಸುಪ್ರೀಂ ಪೀಠ ಪ್ರಕರಣದ ವಿಚಾರಣೆಯನ್ನು ಗುರುವಾರ ನಡೆಸುವುದಾಗಿ ತಿಳಿಸಿದೆ.
ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಹಾಗೂ ಶಾಹಿದ್ ಕಪೂರ್ ಅಭಿನಯದ ಪದ್ಮಾವತಿ ಚಿತ್ರಕ್ಕೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸೆನ್ಸಾರ್ ಮಂಡಳಿ ಚಿತ್ರದ ಹೆಸರು ಪದ್ಮಾವತ್ ಎಂದು ಹಾಗೂ ಇತರೆ ಕೆಲ ಬದಲಾವಣೆ ಮಾಡಿದ ನಂತರ ಚಿತ್ರ ಬಿಡುಗಡೆಗೆ ಅನುಮತಿ ನೀಡಿದ್ದು, ಚಿತ್ರ ಜನವರಿ 25ರಂದು ದೇಶಾದ್ಯಂತ ತೆರೆ ಕಾಣುತ್ತಿದೆ. ಆದರೆ ರಾಜಸ್ಥಾನ, ಮಧ್ಯಪ್ರದೇಶ, ಹರಿಯಾಣ, ಹಿಮಾಚಲ ಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಸಿನಿಮಾಗೆ ನಿಷೇಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರ ನಿರ್ಮಾಪಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


