ಮೂರೇ ದಿನದಲ್ಲಿ 50 ಕೋಟಿ ದಾಟಿದ 'ಪದ್ಮಾವತ್' ಗಳಿಕೆ
ದೇಶಾದ್ಯಂತ ತೀವ್ರ ವಿರೋಧದ ನಡುವೆಯೂ ಸಂಜಯ್ ಲೀಲಾ ಭನ್ಸಾಲಿ ಅವರ ವಿವಾದಾತ್ಮಕ ಚಿತ್ರ 'ಪದ್ಮಾವತ್' ಉತ್ತಮ ಆರಂಭ ಕಂಡಿದ್ದು, ಬಿಡುಗಡೆಯಾದ...

Published On :
ಮುಂಬೈ: ದೇಶಾದ್ಯಂತ ತೀವ್ರ ವಿರೋಧದ ನಡುವೆಯೂ ಸಂಜಯ್ ಲೀಲಾ ಭನ್ಸಾಲಿ ಅವರ ವಿವಾದಾತ್ಮಕ ಚಿತ್ರ 'ಪದ್ಮಾವತ್' ಉತ್ತಮ ಆರಂಭ ಕಂಡಿದ್ದು, ಬಿಡುಗಡೆಯಾದ ಮೂರೇ ದಿನದಲ್ಲಿ 50 ಕೋಟಿ ರುಪಾಯಿ ಗಳಿಸಿದೆ. ಅಲ್ಲದೆ ಒಂದು ವಾರದಲ್ಲಿ 100 ಕೋಟಿ ವಹಿವಾಟು ನಡೆಸುವ ಸಾಧ್ಯತೆ ಇದೆ.
ದೀಪಿಕಾ ಪಡುಕೋಣೆ, ಶಾಹಿದ್ ಕಪೂರ್ ಮತ್ತು ರಣವೀರ್ ಕಪೂರ್ ಅಭಿನಯದ ಪದ್ಮಾವತ್ ಚಿತ್ರ ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಸದ್ದು ಮಾಡುತ್ತಿದ್ದು, ಬಿಡುಗಡೆಯಾದ ಮೊದಲ ದಿನವೇ 19 ಕೋಟಿ ರುಪಾಯಿ ಸಂಗ್ರಹಿಸಿದೆ.
ವಿವಾದಾತ್ಮಕ ಚಿತ್ರ ಕಳೆದ ಗುರುವಾರ ದೇಶಾದ್ಯಂತ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಚಿತ್ರದ ವಿರುದ್ಧ ಪ್ರತಿಭಟನೆ, ಹೋರಾಟ ಮಾಡಿದ ರಜಪೂತರು ಕೂಡ ಚಿತ್ರವನ್ನ ಒಪ್ಪಿಕೊಂಡಿದ್ದಾರೆ.
ಸುಮಾರು 180 ಕೋಟಿ ರುಪಾಯಿ ವೆಚ್ಚದಲ್ಲಿ 'ಪದ್ಮಾವತ್' ಚಿತ್ರ ನಿರ್ಮಿಸಲಾಗಿದ್ದು, ಚಿತ್ರದಲ್ಲಿ ಇತಿಹಾಸ ತಿರುಚಲಾಗಿದೆ. ರಜಪೂತ ಸಮುದಾಯವನ್ನ ಕೀಳಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿದ ಉಗ್ರ ಪ್ರತಿಭಟನೆ ನಡೆಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


