ಬಾಲಿವುಡ್

ಪದ್ಮಾವತ್ ಚಿತ್ರದ ಅಭಿನಯಕ್ಕಾಗಿ ಬಚ್ಚನ್‌ರಿಂದ ದೊಡ್ಡ ಪ್ರಶಸ್ತಿ ಸಿಕ್ಕಿದೆ: ರಣವೀರ್ ಸಿಂಗ್

ವಿವಾದಿತ ಪದ್ಮಾವತ್ ಚಿತ್ರದಲ್ಲಿ ಅಲ್ಲಾವುದ್ದಿನ್ ಖಿಲ್ಜಿ ಪಾತ್ರ ನಿರ್ವಹಿಸಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯಕ್ಕೆ ಬಾಲಿವುಡ್ ಮೇಘಾಸ್ಟಾರ್ ಅಮಿತಾಬ್...

ಪದ್ಮಾವತ್ ಚಿತ್ರದ ಅಭಿನಯಕ್ಕಾಗಿ ಬಚ್ಚನ್‌ರಿಂದ ದೊಡ್ಡ ಪ್ರಶಸ್ತಿ ಸಿಕ್ಕಿದೆ: ರಣವೀರ್ ಸಿಂಗ್
ರಣವೀರ್ ಸಿಂಗ್
Published On :
ಮುಂಬೈ: ವಿವಾದಿತ ಪದ್ಮಾವತ್ ಚಿತ್ರದಲ್ಲಿ ಅಲ್ಲಾವುದ್ದಿನ್ ಖಿಲ್ಜಿ ಪಾತ್ರ ನಿರ್ವಹಿಸಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯಕ್ಕೆ ಬಾಲಿವುಡ್ ಮೇಘಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು ಇದು ನನಗೆ ದೊಡ್ಡ ಪ್ರಶಸ್ತಿ ಎಂದು ರಣವೀರ್ ಸಿಂಗ್ ಟ್ವೀಟ್ ಮಾಡಿದ್ದಾರೆ. 
ಸಾಮಾಜಿಕ ಜಾಲತಾಣಗಳಾದ ಟ್ವೀಟರ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿ ಈ ಕುರಿತು ಟ್ವೀಟ್ ಮಾಡಿರುವ ರಣವೀರ್ ಸಿಂಗ್ ನನ್ನ ಅಭಿನಯವನ್ನು ಬಾಲಿವುಡ್ ಮೇಘಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಮೆಚ್ಚಿಕೊಂಡಿರುವುದು ನನಗೆ ದೊಡ್ಡ ಪ್ರಶಸ್ತಿ ಸಿಕ್ಕಂತಾಗಿದೆ ಎಂದು ಫೋಟೋದೊಂದಿಗೆ ಅಪ್ ಲೋಡ್ ಮಾಡಿದ್ದಾರೆ. 
ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರು ಪದ್ಮಾವತ್ ಚಿತ್ರವನ್ನು ನಿರ್ದೇಶಿಸಿದ್ದು ಚಿತ್ರದ ಕುರಿತು ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆದಿದ್ದವು. ತೀವ್ರ ವಿರೋಧದ ನಡುವೆಯೂ ಬಿಡುಗಡೆಯಾಗಿರುವ ಚಿತ್ರ ಭರ್ಜರಿ ಓಟ ಮುಂದುವರೆಸಿದೆ. 
ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಶಾಹೀದ್ ಕಪೂರ್, ಅದಿತಿ ರಾವ್ ಹೈದರಿ ಮತ್ತು ಜಿಮ್ ಸರ್ಭಾ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.