ನಟ ಸಂಜಯ್ ದತ್ ವೈಭವೀಕರಣ ಬೇಡ: ಸಚಿವ ಸತ್ಯಪಾಲ್ ಸಿಂಗ್
ಸಂಜೌ ದತ್ ನ್ನು ವೈಭವೀಕರಿಸಬಾರದು ಎಂದು ಕೇಂದ್ರ ಸಚಿವ ಹಾಗೂ ಮುಂಬೈ ನ ಮಾಜಿ ಪೊಲೀಸ್ ಆಯುಕ್ತ ಸತ್ಯಪಾಲ್ ಸಿಂಗ್ ಹೇಳಿದ್ದಾರೆ.

Published On :
ಭೋಪಾಲ್: ಸಂಜೌ ದತ್ ನ್ನು ವೈಭವೀಕರಿಸಬಾರದು ಎಂದು ಕೇಂದ್ರ ಸಚಿವ ಹಾಗೂ ಮುಂಬೈ ನ ಮಾಜಿ ಪೊಲೀಸ್ ಆಯುಕ್ತ ಸತ್ಯಪಾಲ್ ಸಿಂಗ್ ಹೇಳಿದ್ದಾರೆ.
1993 ರ ಮುಂಬೈ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸಂಜಯ್ ದತ್ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ(ಎಕೆ-56 ರೈಫಲ್) ಹೊಂದಿದ್ದ ಅಪರಾಧ ಸಾಬೀತಾಗಿತ್ತು. ಇದೇ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಸಂಜಯ್ ದತ್ 2016 ರಲ್ಲಿ ಬಿಡುಗಡೆಯಾಗಿದ್ದರು.
"ಅಪರಾಧಿಗಳನ್ನು ವೈಭವೀಕರಿಸುವುದನ್ನು ಕಡಿಮೆ ಮಾಡಬೇಕು, ದಾವೂದ್ ಇಬ್ರಾಹಿಂ ಇರಲಿ ಬೇರೆ ಯಾರೇ ಇರಲಿ ಯಾವುದೇ ಕ್ರಿಮಿನಲ್ ಗಳನ್ನು ವೈಭವೀಕರಿಸಬಾರದು. ಅಂತೆಯೇ ಸಂಜಯ್ ದತ್ ಅವರೂ ಸಹ ಕ್ರಿಮಿನಲ್ ಹಿನ್ನೆಲೆಯುಳ್ಳವರಾಗಿದ್ದು, ಅವರನ್ನೂ ವೈಭವೀಕರಿಸುವುದು ಸರಿಯಲ್ಲ. ಸತ್ಯವನ್ನು ಸಮಾಜದ ಮುಂದಿಡಬೇಕು ಎಂದು ಸತ್ಯಪಾಲ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಸಂಜಯ್ ದತ್ ಜೀವನ ಚರಿತ್ರೆಯ ಸಿನಿಮಾ ಸಂಜು ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಸಿನಿಮಾಗಳನ್ನು ಸಾಮಾನ್ಯವಾಗಿ ನೋಡುವುದಿಲ್ಲ, ಅಂತೆಯೇ ಆ ಸಿನಿಮಾವನ್ನೂ ಸಹ ನೋಡಿಲ್ಲ. ಸಂಜಯ್ ದತ್ ಬಗ್ಗೆ ಎಲ್ಲರಿಗೂ ತಿಳಿದಿದೆ. ಈ ಸಿನಿಮಾ ಬಗ್ಗೆ ನನ್ನ ಪ್ರತಿಕ್ರಿಯೆ, ಅಭಿಪ್ರಾಯದ ಬಗ್ಗೆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಿಂಗ್ ಹೇಳಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಅವರಿಷ್ಟದಂತೆ ಸಿನಿಮಾ ಮಾಡುವ ಹಕ್ಕಿದೆ, ಆದರೆ ಅಪರಾಧಿಗಳನ್ನು ವೈಭವೀಕರಿಸಬಾರದಷ್ಟೇ ಎಂದು ಹೇಳಿದ್ದಾರೆ. ಸಂಜಯ್ ದತ್ ಅವರನ್ನು ವೈಭವೀಕರಿಸಿ ತೋರಿಸಿರುವುದಕ್ಕೆ ಸಂಜು ಸಿನಿಮಾ ವಿರುದ್ಧ ಟೀಕೆಗಳು ಕೇಳಿಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sanjay Duttಸಂಜಯ್ ದತ್ಟೀಕೆSatyapal Singhಸತ್ಯಪಾಲ್ ಸಿಂಗ್CriticsವೈಭವೀಕರಣSanju MovieGlorifiedಸಂಜು ಸಿನಿಮಾ ವಿಮರ್ಶೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


