ಧಡಕ್ ಟ್ರೇಲರ್ ಬಿಡುಗಡೆ: ಶ್ರೀದೇವಿ ಪುತ್ರಿ ಜಾಹ್ನವಿಗೆ ಸಹೋದರ ಅರ್ಜುನ್ ಹೃದಯಸ್ಪರ್ಶಿ ಟ್ವೀಟ್!
ಬಾಲಿವುಡ್ ನ ದಿವಂಗತ ನಟಿ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಅಭಿನಯದ ಧಡಕ್ ಚಿತ್ರದ ಟ್ರೇಲರ್ ಬಿಡುಗಡೆ ಹಿನ್ನಲೆಯಲ್ಲಿ ಸಹೋದರ ಅರ್ಜುನ್ ಕಪೂರ್ ಹೃದಯಸ್ಪರ್ಶಿ ಟ್ವೀಟ್ ಮಾಡಿದ್ದಾರೆ.

Published On :
ಮುಂಬೈ: ಬಾಲಿವುಡ್ ನ ದಿವಂಗತ ನಟಿ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಅಭಿನಯದ ಧಡಕ್ ಚಿತ್ರದ ಟ್ರೇಲರ್ ಬಿಡುಗಡೆ ಹಿನ್ನಲೆಯಲ್ಲಿ ಸಹೋದರ ಅರ್ಜುನ್ ಕಪೂರ್ ಹೃದಯಸ್ಪರ್ಶಿ ಟ್ವೀಟ್ ಮಾಡಿದ್ದಾರೆ.
ಇಂದು ಮುಂಬೈನಲ್ಲಿ ಜಾಹ್ನವಿ ಅಭಿನಯದ ಧಡಕ್ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮವಿದ್ದು, ಈ ಹಿನ್ನಲೆಯಲ್ಲಿ ನಟ ಅರ್ಜುನ್ ಕಪೂರ್ ಟ್ವೀಟ್ ಮಾಡಿದ್ದಾರೆ. ತಮ್ಮ ಸಹೋದರಿ ಜಾಹ್ನವಿ ಕುರಿತು ಸರಣಿ ಟ್ವೀಟ್ ಮಾಡಿರುವ ಅರ್ಜುನ್ ಕಪೂರ್, ಸಿನಿಮಾರಂಗಕ್ಕೆ ಪದಾರ್ಪಣೆ ಮಾಡುತ್ತಿರುವ ತಂಗಿಗೆ ಸ್ವಾಗತ ಕೋರಿದ್ದಾರೆ. ಅಂತೆಯೇ ಸಿನಿಮಾ ರಂಗದಲ್ಲಿ ಶ್ರದ್ಧೆ, ಪ್ರಾಮಾಣಿಕತೆ ಮತ್ತು ಶ್ರಮಪಟ್ಟು ಕೆಲಸ ಮಾಡು ಎಂದು ಕಿವಿ ಮಾತು ಹೇಳಿದ್ದಾರೆ.
'ನಾಳೆಯಿಂದ ನೀನು ಅಭಿಮಾನಿಗಳೊಂದಿಗೆ ಇರುವೆ.. ನಿನ್ನ ಧಡಕ್ ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿದ್ದು, ಮೊದಲಿಗೆ ನಾನು ಕ್ಷಮೆ ಕೇಳುತ್ತೇನೆ. ನಾಳೆ ನಾನು ಮುಂಬೈನಲ್ಲಿ ಇರುವುದಿಲ್ಲ. ಆದರೆ ಚಿಂತೆ ಬೇಡ.. ಸಿನಿಮಾ ರಂಗಕ್ಕೆ ನಿನಗ ಸ್ವಾಗತ.. ನೀನು ಶ್ರದ್ಧೆ, ಪ್ರಮಾಣಿಕತೆ ಮತ್ತು ಶ್ರಮದಿಂದ ಕೆಲಸ ಮಾಡಿದರೆ ಈ ರಂಗ ನಿನಗೆ ಅದ್ಬುತವಾಗಿ ಕಾಣುತ್ತದೆ. ಪ್ರಾಮಾಣಿಕವಾಗಿ ಕೆಲಸ ಮಾಡು, ಎದುರಾಳಿಗಳನ್ನು ಗೌರವಿಸು, ಕಲಿಕೆಗಾಗಿ ನಿನ್ನನ್ನು ನೀನು ಸಂಪೂರ್ಣ ತೊಡಗಿಸಿಕೊ, ನಿನ್ನದೇ ಹೊಸ ಶೈಲಿ ಮತ್ತು ಮಾರ್ಗದಲ್ಲಿ ಚಲಿಸು. ಇದು ಸುಲಭವಲ್ಲ ಎಂದು ತಿಳಿದಿದೆ. ಆದರೆ ನೀನು ಯಾವುದೇ ಸವಾಲಿಗೆ ಸಿದ್ಧ ಎಂದು ನನಗೆ ತಿಳಿದಿದೆ ಎಂದು ಅರ್ಜುನ್ ಕಪೂರ್ ಟ್ವೀಟ್ ಮಾಡಿದ್ದಾರೆ.
ಅಂತೆಯೇ ಧಡಕ್ ಚಿತ್ರ ತಂಡಕ್ಕೆ, ಚಿತ್ರ ನಿರ್ದೇಶಕರಿಗೆ, ನಿರ್ಮಾಪಕ ಕರಣ್ ಜೋಹಾರ್ ಅವರಿಗೆ ಅರ್ಜುನ್ ಕಪೂರ್ ಶುಭ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MumbaiಮುಂಬೈBollywoodಬಾಲಿವುಡ್Arjun Kapoorಅರ್ಜುನ್ ಕಪೂರ್Srideviಶ್ರೀದೇವಿಜಾಹ್ನವಿ ಕಪೂರ್Janhvi KapoorDhadak Movieಧಡಕ್ ಚಿತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


