ಚಿತ್ರರಂಗ ಪ್ರವೇಶಿಸುವಾಗ ಸ್ತನದ ಗಾತ್ರ ಹೆಚ್ಚಿಸಿಕೊಳ್ಳುವಂತೆ ಸಲಹೆ ನೀಡಿದ್ದರು: ದೀಪಿಕಾ
ಬಾಲಿವುಡ್ ನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೀಪಿಕಾ ಪಡುಕೋಣೆ ಅವರು ಬಾಲಿವುಡ್ ಪ್ರವೇಶಿಸುವಾಗ ಸ್ತನಗಳ...

Published On :
ಮುಂಬೈ: ಬಾಲಿವುಡ್ ನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೀಪಿಕಾ ಪಡುಕೋಣೆ ಅವರು ಬಾಲಿವುಡ್ ಪ್ರವೇಶಿಸುವಾಗ ಸ್ತನಗಳ ಗಾತ್ರವನ್ನು ಹೆಚ್ಚಿಸಿಕೊಳ್ಳುವಂತೆ ಸಲಹೆ ನೀಡಿದ್ದರು ಎಂದು ಹೇಳಿದ್ದಾರೆ.
10 ವರ್ಷಗಳ ಹಿಂದೆ ಚಿತ್ರಕ್ಕಾಗಿ ಆಡಿಷನ್ ನಡೆಯುತ್ತಿತ್ತು ಈ ವೇಳೆ ನನಗೆ ಹಲವರು ತಮ್ಮ ಸ್ತಾನಗಳ ಗಾತ್ರವನ್ನು ಹೆಚ್ಚಿಸಿಕೊಳ್ಳುವಂತೆ ಸಲಹೆ ನೀಡಿದ್ದರು. ಸೌಂದರ್ಯವಾಗಿ ಕಾಣುವುದಕ್ಕಾಗಿ ಸ್ತನಗಳ ಪಾತ್ರವೂ ಮುಖ್ಯ ಎಂದು ಹೇಳಿದ್ದರು ಎಂದು ಹೇಳಿದ್ದಾರೆ.
ನಾನು ಕಲೆಯನ್ನು ನಂಬಿ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದೆ, ಇಂದು ನನ್ನ ಛಲ ಮತ್ತು ಪರಿಶ್ರಮದಿಂದ ಈ ಸ್ಥಾನದಲ್ಲಿದ್ದೇನೆ ಎಂದು ಸಂದರ್ಶನವೊಂದರಲ್ಲಿ ದೀಪಿಕಾ ಪಡುಕೋಣೆ ಹೇಳಿದ್ದಾರೆ.
ದೀಪಿಕಾ ಪಡುಕೋಣೆ ಅವರು ಬಾಲಿವುಡ್ ನಟ ಶಾರುಕ್ ಖಾನ್ ಅಭಿನಯದ ಓಂ ಶಾಂತಿ ಓಂ ಚಿತ್ರದ ಮೂಲಕ ಬಾಲಿವುಡ್ ಗೆ ಪ್ರವೇಶಿಸಿದ್ದರು. ನಂತರ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


