ಬಾಲಿವುಡ್

ಕಾಸ್ಟಿಂಗ್ ಕೌಚ್: ತಮಗಾದ ಕರಾಳ ಅನುಭವವನ್ನು ಬಿಚ್ಚಿಟ್ಟ ಬಾಲಿವುಡ್ ನಟಿ!

ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಸಾಮಾನ್ಯ ಎಂದು ಕನ್ನಡದ ನಟಿ ಪವಿತ್ರ ಲೋಕೇಶ್ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದು ಚಿತ್ರರಂಗದಲ್ಲಿ ಬಿರುಗಾಳಿ ಎಬ್ಬಿಸಿತ್ತು.

ಕಾಸ್ಟಿಂಗ್ ಕೌಚ್: ತಮಗಾದ ಕರಾಳ ಅನುಭವವನ್ನು ಬಿಚ್ಚಿಟ್ಟ ಬಾಲಿವುಡ್ ನಟಿ!
ಸ್ವರಾ ಬಾಸ್ಕರ್
Published On :
ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಸಾಮಾನ್ಯ ಎಂದು ಕನ್ನಡದ ನಟಿ ಪವಿತ್ರ ಲೋಕೇಶ್ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದು ಚಿತ್ರರಂಗದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಇದೀಗ ಬಾಲಿವುಡ್ ನಟಿ ಸಹ ತಮಗಾದ ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ. 
ಬಾಲಿವುಡ್ ನಟಿ ಸ್ವರಾ ಬಾಸ್ಕರ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾಸ್ಟಿಂಗ್ ಕೌಚ್ ವಿರುದ್ಧ ಮಾತನಾಡಿದ್ದಾರೆ. ಇದನ್ನು ಧೈರ್ಯವಾಗಿ ಎದುರಿಸದೇ ಹೊರತು ಅದರಿಂದ ಹೊರಬರಲು ಸಾಧ್ಯವಿಲ್ಲ ಎಂದಿದ್ದಾರೆ. 
ಬಾಲಿವುಡ್ ನ ಖ್ಯಾತ ನಿರ್ಮಾಪಕನ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದ ವ್ಯಕ್ತಿಯೋರ್ವ ನನ್ನ ಮನೆಯ ವಿಳಾಸ ಪಡೆದಿದ್ದ. ಒಂದು ದಿನ ಮೀಟಿಂಗ್ ನಲ್ಲಿ ನನಗೆ ಕಿಸ್ ಮಾಡಲು ಮುಂದಾಗಿದ್ದ ಆ ದುರುಳ ಐ ಲವ್ ಯು ಬೇಬಿ ಎಂದಿದ್ದ. ಆತನಿಂದ ತಪ್ಪಿಸಿಕೊಂಡು ಬರಲು ಯತ್ನಿಸಿದೆ ಈ ವೇಳೆ ನನ್ನ ಕೂದಲುಗಳನ್ನು ಹಿಡಿದು ಎಳೆದ ಎಂದು ಸ್ವರಾ ಅವರು ತಮಗಾದ ಭಯಾನಕ ಘಟನೆಯನ್ನು ಬಿಚ್ಚಿಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.