ನಟ ಇರ್ಫಾನ್ ಖಾನ್ ಚಿಕಿತ್ಸೆಗೆ ದಾಖಲಾಗಿಲ್ಲ: ಮುಂಬೈಯ ಕೋಕಿಲಾಬೆನ್ ಆಸ್ಪತ್ರೆ ಸ್ಪಷ್ಟನೆ
ಬಾಲಿವುಡ್ ನಟ ಇರ್ಫಾನ್ ಖಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವದಂತಿ ಸುಳ್ಳು ಎಂದು ಮುಂಬೈನ...

ಮುಂಬೈ; ಬಾಲಿವುಡ್ ನಟ ಇರ್ಫಾನ್ ಖಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವದಂತಿ ಸುಳ್ಳು ಎಂದು ಮುಂಬೈನ ಕೋಕಿಲಾಬೆನ್ ಆಸ್ಪತ್ರೆ ಸ್ಪಷ್ಟಪಡಿಸಿದೆ.
ಇರ್ಫಾನ್ ಖಾನ್ ಅವರು ಮೆದುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂಬ ಗಾಳಿಸುದ್ದಿ ಹಬ್ಬಿತ್ತು.
ಮೊನ್ನೆ 5ರಂದು ನಟ ಇರ್ಫಾನ್ ಖಾನ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ತಾನು ಅಪರೂಪದ ಖಾಯಿಲೆಯಿಂದ ಬಳಲುತ್ತಿದ್ದು ಈ ಬಗ್ಗೆ ಎಲ್ಲ ವಿವರಗಳನ್ನು ಸದ್ಯದಲ್ಲಿಯೇ ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.
ನಟ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ನಿಜವಲ್ಲ, ಅವರು ಇಲ್ಲಿಗೆ ಬಂದಿಲ್ಲ ಎಂದು ಮುಂಬೈಯ ಕೋಕಿಲಾಬೆನ್ ಆಸ್ಪತ್ರೆ ಅಧಿಕೃತವಾಗಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದೆ.
ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಯನ್ನು ನಟನ ಆಪ್ತ ವಲಯ ಕೂಡ ತಳ್ಳಿಹಾಕಿದೆ.
ಅವರಿಗೆ ಕ್ಯಾನ್ಸರ್ ಇದೆಯೇ ಎಂದು ಕೇಳಿದ್ದಕ್ಕೆ ಅವರ ಆಪ್ತರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ನಾವು ಸದ್ಯದಲ್ಲಿಯೇ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತೇವೆ. ಈ ಸಂದರ್ಭದಲ್ಲಿ ಏನೂ ಹೇಳಲು ಸಾಧ್ಯವಿಲ್ಲ ಎಂದು ನಟನ ವಕ್ತಾರರು ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


