ಬಾಲಿವುಡ್

ಉದ್ಯಮಿ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ ಖ್ಯಾತ ಬಾಲಿವುಡ್ ನಟಿ ಜೀನತ್ ಅಮಾನ್

ಬಾಲಿವುಡ್ ನ ಖ್ಯಾತ ಹಿರಿಯ ನಟಿ ಜೀನತ್ ಅಮಾನ್ ಅವರು ಮುಂಬೈ ಮೂದಲ ಉದ್ಯಮಿಯೊಬ್ಬರ ವಿರುದ್ಧ ಅತ್ಯಾಚಾರ ದೂರು ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಉದ್ಯಮಿ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ ಖ್ಯಾತ ಬಾಲಿವುಡ್ ನಟಿ ಜೀನತ್ ಅಮಾನ್
ಸಂಗ್ರಹ ಚಿತ್ರ
Published On :
ಮುಂಬೈ: ಬಾಲಿವುಡ್ ನ ಖ್ಯಾತ ಹಿರಿಯ ನಟಿ ಜೀನತ್ ಅಮಾನ್ ಅವರು ಮುಂಬೈ ಮೂದಲ ಉದ್ಯಮಿಯೊಬ್ಬರ ವಿರುದ್ಧ ಅತ್ಯಾಚಾರ ದೂರು ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಸುದ್ದಿಸಂಸ್ಛೆಯೊಂದರ ವರದಿಯನ್ವಯ ಮುಂಬೈನ ಜುಹು ಪೊಲೀಸ್ ಠಾಣೆಯಲ್ಲಿ ನಟಿ ಜೀನತ್ ಅಮಾನ್ ಅತ್ಯಾಚಾರ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮೂಲಗಳ ಪ್ರಕಾರ ಜೀನತ್ ಅಮಾನ್ ದೂರಿನ ಮೇರೆಗೆ ಜುಹು ಪೊಲೀಸರು ಆರೋಪಿಯನ್ನು ನಿನ್ನೆ ರಾತ್ರಿ ಬಂಧಿಸಿದ್ದು, ಶೀಘ್ರ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ಜೀನತ್ ಅಮಾನ್ ಅವರ ಅತ್ಯಾಚಾರ ಪ್ರಕರಣವನ್ನು ಮುಂಬೈ ಪೊಲೀಸರು ಅಪರಾಧ ವಿಭಾಗ ದಳಕ್ಕೆ ಹಸ್ತಾಂತರಿಸಿದ್ದಾರೆ.
68 ವರ್ಷದ ಜೀನತ್ ಅಮಾನ್ ಅವರು 70-80ರ ದಶಕದ ಖ್ಯಾತ ನಾಯಕ ನಟಿಯಾಗಿದ್ದರು. ಡಾನ್, ಸತ್ಯಂ ಶಿವಂ, ಸಿಖಂದರ್ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.