ಬಾಲಿವುಡ್

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ’ಬಂಗ ಬಿಭೂಷಣ’ ಪ್ರಶಸ್ತಿ

ಭಾರತದ ಪ್ರಕ್ಯಾತ ಗಾಯಕಿ ಆಶಾ ಭೋಸ್ಲೆ ಅವರನ್ನು ಪಶ್ಚಿಮ ಬಂಗಾಳದ ಅತ್ಯುನ್ನತ ನಾಗರಿಕ ಪುರಸ್ಕಾರ ಬಂಗ ಬಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ’ಬಂಗ ಬಿಭೂಷಣ’ ಪ್ರಶಸ್ತಿ
ಆಶಾ ಭೋಸ್ಲೆ
Published On :
ಕೋಲ್ಕತ್ತಾ: ಭಾರತದ ಪ್ರಕ್ಯಾತ ಗಾಯಕಿ ಆಶಾ ಭೋಸ್ಲೆ ಅವರನ್ನು ಪಶ್ಚಿಮ ಬಂಗಾಳದ ಅತ್ಯುನ್ನತ ನಾಗರಿಕ ಪುರಸ್ಕಾರ  ಬಂಗ ಬಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸೋಮವಾರ ಸಂಜೆ ನಡೆದ ಸಮಾರಂಬದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಶಾ ಅವರಿಗೆ ಪ್ರಶಸ್ತಿ  ಪ್ರಧಾನ ಮಾಡಿದ್ದಾರೆ.
ಇದೇ ವೇಳೆ ಆಶಾ ಅವರೊಡನೆ ಖ್ಯಾತ ಲೇಖಕ ಸಮರೇಶ್ ಮಜುಮ್ದಾರ್ ಗೆ ಬಂಗ ಬಿಭೂಷಣ್ ಹಾಗೂ ಫುಟ್‍ಬಾಲ್ ಆಟಗಾರ ಸಬ್ರತಾ ಭಟ್ಟಾಚಾರ್ಯ ಬಂಗ ಭೂಷಣ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
2011 ರಲ್ಲಿ ಅಧಿಕಾರಕ್ಕೆ ಬಂದ ನಂತರ, ಬ್ಯಾನರ್ಜಿ ವಿವಿಧ ಕ್ಷೇತ್ರಗಲಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದ ಶ್ರೇಷ್ಠ ವ್ಯಕ್ತಿಗಳ ಗುರುತಿಸಿ ಬಂಗ ಬಿಭೂಷಣ್ ಹ್ಗೂ ಬಂಗ ಭೂಷಣ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.