ಬಾಲಿವುಡ್

ಕೊನೆಗೂ ದೀಪಿಕಾ - ರಣ್ ವೀರ್ ಮದುವೆ ಫೋಟೋಗಳು ಬಹಿರಂಗ

ಬಾಲಿವುಡ್ ಖ್ಯಾತ ತಾರೆಯರಾದ ದೀಪಿಕಾ ಪಡುಕೋಣೆ ಮತ್ತು ರಣ್‍ವೀರ್ ಸಿಂಗ್ ಅವರು ಬುಧವಾರ ಕೊಂಕಣಿ...

ಕೊನೆಗೂ ದೀಪಿಕಾ - ರಣ್ ವೀರ್ ಮದುವೆ ಫೋಟೋಗಳು ಬಹಿರಂಗ
ಡೀಪ್ ವೀರ್
Published On :
ಬೆಂಗಳೂರು: ಬಾಲಿವುಡ್ ಖ್ಯಾತ ತಾರೆಯರಾದ ದೀಪಿಕಾ ಪಡುಕೋಣೆ ಮತ್ತು ರಣ್‍ವೀರ್ ಸಿಂಗ್ ಅವರು ಬುಧವಾರ ಕೊಂಕಣಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಸಿಂಧಿ ಶೈಲಿಯ ಮದುಮಕ್ಕಳಾಗಿ ಮಿಂಚಿದ ಫೋಟೋ ಗುರುವಾರ ಬಹಿರಂಗವಾಗಿದೆ.
ಇಟಲಿಯ ಸುಂದರ ಪ್ರವಾಸಿ ತಾಣ ಲೇಕ್ ಕೊಮೊವಿನ ವಿಲ್ಲಾ ಡೆಲ್ ಬಲ್ಬಿಯಾನೆಲ್ಲೊದಲ್ಲಿ ಡೀಪ್‍ವೀರ್ ಮದುವೆಯಾಗಿದ್ದು, ಅವರ ಮದುವೆ ಫೋಟೋಗಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಹಲವು ಅಭಿಮಾನಿಗಳು ಜಾತಕಪಕ್ಷಿಯಂತೆ ಕಾಯುತ್ತಿದ್ದರು.
ದೀಪಿಕಾ ಪಡುಕೋಣೆ ಮತ್ತು ರಣ್ ವೀರ್ ಸಿಂಗ್ ಇಬ್ಬರು ತಮ್ಮ ವಿವಾಹ ಸಂಭ್ರಮದ ಚಿತ್ರಗಳನ್ನು ಇಂದು ಟ್ವೀಟ್ ಮಾಡಿದ್ದು, ಅಂತೂ,ಇಂತೂ ವರ್ಷಗಟ್ಟಲೇ ಚರ್ಚೆ ಮತ್ತು ನಿರೀಕ್ಷೆಗೆ ಕಾರಣವಾಗಿದ್ದ ಡೀಪ್ ವೀರ್ ಜೋಡಿಯ ಮದುವೆ ನಡೆದಿದೆ.
ಇಟಲಿಯ ಸುಂದರ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾಯುತ್ತಿರುವ ಅವರ ಅಭಿಮಾನಿಗಳನ್ನು ನಿರಾಶೆಗೊಳಿಸಬಾರದು ಎಂಬ ಉದ್ದೇಶದಿಂದ ನವ ದಂಪತಿ ಆಯ್ದ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.