ಥಗ್ಸ್ ಆಫ್ ಹಿಂದೂಸ್ತಾನ್ ಅಟ್ಟರ್ ಫ್ಲಾಪ್: ಅಭಿಮಾನಿಗಳಿಗೆ ಅಮೀರ್ ಖಾನ್ ಹೇಳಿದ್ದೇನು?
ಬಾಲಿವುಡ್ ನ ಬಹುನಿರೀಕ್ಷಿತ ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರ ಅದ್ಧೂರಿ ಓಪನಿಂಗ್ ಕಂಡರೂ ನಂತರದ ದಿನಗಳಲ್ಲಿ ಹೀನಾಯ ಪ್ರದರ್ಶನ ಕಂಡು ಚಿತ್ರ ಅಟ್ಟರ್ ಫ್ಲಾಪ್ ಆಗಿದೆ...

Published On :
ಬಾಲಿವುಡ್ ನ ಬಹುನಿರೀಕ್ಷಿತ ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರ ಅದ್ಧೂರಿ ಓಪನಿಂಗ್ ಕಂಡರೂ ನಂತರದ ದಿನಗಳಲ್ಲಿ ಹೀನಾಯ ಪ್ರದರ್ಶನ ಕಂಡು ಚಿತ್ರ ಅಟ್ಟರ್ ಫ್ಲಾಪ್ ಆಗಿದೆ. ಈ ಹಿನ್ನೆಲೆಯಲ್ಲಿ ಮಿಸ್ಟರ್ ಪರ್ಫೆಕ್ಟ್ ಖ್ಯಾತಿಯ ಅಮೀರ್ ಖಾನ್ ಚಿತ್ರದ ಕುರಿತಂತೆ ಅಭಿಮಾನಿಗಳಿಗೆ ಕೆಲ ಮಾತುಗಳನ್ನು ಹೇಳಿದ್ದಾರೆ.
300 ಕೋಟಿ ರುಪಾಯಿ ಬಜೆಟ್ ನಲ್ಲಿ ನಿರ್ಮಾಣವಾಗಿದ್ದ ಥಗ್ಸ್ ಆಫ್ ಹಿಂದೂಸ್ತಾನ್ ಬಿಡುಗಡೆಯಾಗಿ 22 ದಿನ ಕಳೆದರೂ 150 ಕೋಟಿ ರುಪಾಯಿ ಗಳಿಸಲು ಸಾಧ್ಯವಾಗಿಲ್ಲ. ಅಲ್ಲಿಗೆ ಚಿತ್ರ ಹೀನಾಯವಾಗಿ ಸೋತಿದ್ದು ಈ ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತಿರುವ ಅಮೀರ್ ಖಾನ್ ತಪ್ಪುಗಳ ಕುರಿತಂತೆ ಹೇಳಿಕೊಂಡಿದ್ದಾರೆ.
ಚಿತ್ರ ಫ್ಲಾಪ್ ಆಗಿದ್ದರಿಂದ ವಿತರಕರು ಹಣವನ್ನು ಹಿಂದಿರುಗಿಸುವಂತೆ ಮನವಿ ಮಾಡಿದ್ದು ಇದಕ್ಕೆ ಉತ್ತರಿಸಿರುವ ಅಮೀರ್ ತಾವು ವಿತರಕರಿಗೆ ಹಣ ನೀಡುವುದಾಗಿ ಹಾಗೂ ಚಿತ್ರ ಸೋಲಿನ ಸಂಪೂರ್ಣ ಹೊಣೆ ಹೊರುವುದಾಗಿ ಹೇಳಿದ್ದಾರೆ.
ನಾವು ನಮ್ಮ ಕೈಯಲ್ಲಾದಷ್ಟು ಒಳ್ಳೆಯದನ್ನೇ ಕೊಡಲು ಪ್ರಯತ್ನಿಸಿದ್ದೇವೆ. ಆದರೆ ಕೆಲವೊಂದು ಕಡೆ ಎಡವಿದ್ದು ಅದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಇನ್ನು ಚಿತ್ರವನ್ನು ಮೆಚ್ಚಿದ ಕೆಲ ಅಭಿಮಾನಿಗಳಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.
300 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರ ಮೊದಲ ದಿನ ಕಲೆಕ್ಷನ್ನಲ್ಲಿ ಬಾಹುಬಲಿ ಚಿತ್ರದ ದಾಖಲೆಯನ್ನು ಧೂಳಿಪಟ ಮಾಡಿತ್ತು. ಆದರೆ ನಂತರ ದಿನಗಳಲ್ಲಿ ಚಿತ್ರದ ಬಗ್ಗೆ ವ್ಯತಿರಿಕ್ತ ಅಭಿಪ್ರಾಯಗಳು ಕೇಳಿಬಂದಿದ್ದರಿಂದ ಚಿತ್ರವನ್ನು ನೋಡಲು ಅಭಿಮಾನಿಗಳು ಹಿಂದೇಟು ಹಾಕಿದರ. ಇದರಿಂದಾಗಿ ಒಟ್ಟಾರೆ 150 ಕೋಟಿ ರುಪಾಯಿ ಗಳಿಸಲಷ್ಟೇ ಸಫಲವಾಯಿತು.
#AamirKhan On #ThugsOfHindostan Failure.
Most Humble SuperStar
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


