ಬಾಲಿವುಡ್

ನವೆಂಬರ್ ತಿಂಗಳಲ್ಲಿ ಜೋಧ್ ಪುರದಲ್ಲಿ ಪ್ರಿಯಾಂಕಾ ಚೋಪ್ರಾ ಮದುವೆ?

ಈಗಾಗಲೇ ಅಮೆರಿಕಾದ ಸಿಂಗರ್ ನಿಕ್ ಜೋನಾಸ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿರುವ ಬಾಲಿವುಡ್ ನಟಿ....

ನವೆಂಬರ್ ತಿಂಗಳಲ್ಲಿ ಜೋಧ್ ಪುರದಲ್ಲಿ ಪ್ರಿಯಾಂಕಾ ಚೋಪ್ರಾ ಮದುವೆ?
ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಾಸ್ ಅವರು ಮಂಗಳವಾರ ಜೋಧ್ ಪುರದ ಮೆಹ್ರಾನಗರ ಕೋಟೆಗೆ ಭೇಟಿ ನೀಡಿದರು.
Published On :
ನವದೆಹಲಿ: ಈಗಾಗಲೇ ಅಮೆರಿಕಾದ ಸಿಂಗರ್ ನಿಕ್ ಜೋನಾಸ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. 
ಈಗಾಗಲೇ ಮದುವೆಗೆ ಭರ್ಜರಿ ಸಿದ್ಧತೆ ನಡೆಸಿರುವ ಹಾಲಿವುಡ್ ಹಾಗೂ ಬಾಲಿವುಡ್ ತಾರಾ ಜೋಡಿ, ನವೆಂಬರ್ ಅಂತ್ಯಕ್ಕೆ ಜೋಧ್ ಪುರದಲ್ಲಿ ಸಾಂಸರಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ವರದಿಗಳು ತಿಳಿಸಿವೆ. 
ತಾರಾ ಜೋಡಿ ತಮ್ಮ ಮದುವೆಯ ಗುಟ್ಟು ಬಿಟ್ಟುಕೊಟ್ಟಿಲ್ಲವಾದರೂ ಇತ್ತೀಚಿಗೆ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಾಸ್ ಇಬ್ಬರೂ ಜೋಧ್ ಪುರದ ಮೆಹ್ರಾನಗರ ಕೋಟೆಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದರು.
ಆಗಸ್ಟ್ 18ರಂದು ಮುಂಬೈನಲ್ಲಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಾಸ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.