ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ...

Published On :
ಮುಂಬೈ: ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ.
ದಿಲೀಪ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿರುವ ಕುರಿತಂತೆ ಅವರ ಕುಟುಂಬ ಸ್ನೇಹಿತ ಫೈಸಲ್ ಫರೂಖಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
ದಿಲೀಪ್ ಕುಮಾರ್ ಅವರು ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಿಲೀಪ್ ಅವರು ನಿಮೋನಿಯಾದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಶೀಘ್ರಗತಿಯಲ್ಲಿ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಈ ಹಿಂದೆ ಕೂಡ ನಿಮೋನಿಯಾದಿಂದಾಗಿ ದಿಲೀಪ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ನಟ ದಿಲೀಪ್ ಅವರು 1994ರಲ್ಲಿ ದಾದಾ ಸಾಹೇಬ್ ಪಾಲ್ಕೆ, 2015ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜರಾಗಿದ್ದರು, 1998ರಲ್ಲಿ ಕೊನೆಯಬಾರಿಗೆ ಚಲನಚಿತ್ರದಲ್ಲಿ ನಟಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


