ಬಾಲಿವುಡ್

ತನುಶ್ರೀ ಲೈಂಗಿಕ ಕಿರುಕುಳ ಆರೋಪ : ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ-ನಾನಾ ಪಾಟೇಕರ್

ಬಾಲಿವುಡ್ ನಟಿ ತನುಶ್ರೀ ದತ್ತಾ ಮಾಡಿರುವ ತಮ್ಮ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನಟ ನಾನಾ ಪಾಟೇಕರ್ ಹೇಳಿದ್ದಾರೆ.

ತನುಶ್ರೀ ಲೈಂಗಿಕ ಕಿರುಕುಳ ಆರೋಪ : ನನ್ನ  ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ-ನಾನಾ ಪಾಟೇಕರ್
ನಾನಾ ಪಾಟೇಕರ್
Published On :

ಮುಂಬೈ: ಬಾಲಿವುಡ್ ನಟಿ ತನುಶ್ರೀ ದತ್ತಾ ಮಾಡಿರುವ ತಮ್ಮ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು  ನಟ ನಾನಾ ಪಾಟೇಕರ್ ಹೇಳಿದ್ದಾರೆ.

ಮುಂಬೈನ ತಮ್ಮ ನಿವಾಸದ ಬಳಿ ಮಾತನಾಡಿದ ನಾನಾ ಪಾಟೇಕರ್, ಮಾಧ್ಯಮಗಳೊಂದಿಗೆ ಮಾತನಾಡದಂತೆ ವಕೀಲರು ಹೇಳಿದ್ದಾರೆ. ಇದನ್ನು 10 ವರ್ಷಗಳಿಂದಲೂ ಹೇಳುತ್ತಲೇ ಬಂದಿದ್ದೇನೆ. ಈಗಲೂ ಕೂಡಾ ತಮ್ಮ ನಿಲುವು ಸತ್ಯದಿಂದ ಕೂಡಿದೆ ಎಂದರು.

ಇಂದು ಸುದ್ದಿಗೋಷ್ಠಿ ನಡೆಸುವುದಾಗಿ ಹೇಳಿದ್ದ ನಾನಾ ಪಾಟೇಕರ್ ಇದ್ದಕ್ಕಿದ್ದಂತೆ  ಸುದ್ದಿಗೋಷ್ಠಿ ಮೊಟಕುಗೊಳಿಸಿದ್ದು, 10 ವರ್ಷಗಳ ಹಿಂದೆ ನಡೆದಿರುವ ಘಟನೆ ಬಗ್ಗೆ ತನುಶ್ರೀ ದತ್ತಾ ತಮ್ಮ ವಿರುದ್ಧ ತಪ್ಪು ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿ 67 ವರ್ಷದ ನಟ ನಾನಾ ಪಾಟೇಕರ್  ಪರ ವಕೀಲರು  ತನುಶ್ರೀ ದತ್ತಾ ಅವರಿಗೆ ಕಾನೂನು ನೋಟಿಸ್ ಕಳುಹಿಸಿದ್ದಾರೆ.

ತನುಶ್ರೀ ದತ್ತಾ ಕೂಡಾ 2008ರ ಚಿತ್ರೀಕರಿಸಿದ ಸಿನಿಮಾ ನಿರ್ದೇಶಕ , ನಿರ್ಮಾಪಕ ಮತ್ತು ನೃತ್ಯನಿರ್ದೇಶಕ ಗಣೇಶ್ ಆಚಾರ್ಯ ಮತ್ತು ನಾನಾ ಪಾಟೇಕರ್ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಮುಂದಿನ ಹೌಸ್ ಪುಲ್ 4 ಚಿತ್ರದ ಚಿತ್ರೀಕರಣಕ್ಕಾಗಿ ಜೋಧ್ ಪುರ್ ನಲ್ಲಿದ್ದ ನಾನಾ ಪಾಟೇಕರ್ ಶನಿವಾರ ಮುಂಬೈಗೆ ಆಗಮಿಸಿದ್ದರು.  10 ವರ್ಷದ ಹಿಂದೆ ನಡೆದಿರುವ ಘಟನೆಯ ಬಗ್ಗೆ ಈಗ ಏಕೆ ತನುಶ್ರೀ ದತ್ತಾ ಆರೋಪ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.