ಟೀಂ ಇಂಡಿಯಾ ಕ್ರಿಕೆಟಿಗ ಬಿಗ್‌ಬಾಸ್ ರಿಯಾಲಿಟಿ ಶೋಗೆ ಎಂಟ್ರಿ, ಅದು ಯಾರು ಗೊತ್ತ!
ಕ್ರಿಕೆಟ್ ನಿಂದ ನಿಷೇಧಗೊಂಡಿರುವ ಟೀಂ ಇಂಡಿಯಾ ಕ್ರಿಕೆಟಿಗ ಬಿಗ್ ಬಾಸ್ ರಿಯಾಲಿಟಿ ಶೋಗೆ ಎಂಟ್ರಿ ಕೊಡುತ್ತಿದ್ದಾರೆ...

Published On :
ಕ್ರಿಕೆಟ್ ನಿಂದ ನಿಷೇಧಗೊಂಡಿರುವ ಟೀಂ ಇಂಡಿಯಾ ಕ್ರಿಕೆಟಿಗ ಬಿಗ್ ಬಾಸ್ ರಿಯಾಲಿಟಿ ಶೋಗೆ ಎಂಟ್ರಿ ಕೊಡುತ್ತಿದ್ದಾರೆ.
ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುವ ಹಿಂದಿ ರಿಯಾಲಿಟಿ ಶೋ ಬಿಗ್‌ಬಾಸ್ ಇದೇ ಸೆಪ್ಟೆಂಬರ್ 16ರಿಂದ ಆರಂಭಗೊಳ್ಳುತ್ತಿದ್ದು ಈ ಶೋಗೆ ಟೀಂ ಇಂಡಿಯಾ ಕ್ರಿಕೆಟಿಗ ಶ್ರೀಶಾಂತ್ ಭಾಗವಹಿಸಲಿದ್ದಾರೆ.
12ನೇ ಆವೃತ್ತಿಯ ಬಿಗ್ ಬಾಸ್ ರಿಯಾಲಿಟಿ ಶೋಗೆ ಈ ಬಾರಿ ಹಲವು ಸೆಲೆಬ್ರೆಟಿಗಳು ಎಂಟ್ರಿ ಕೊಡಲಿದ್ದಾರೆ.
2005ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದ ಶ್ರೀಶಾಂತ್ 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಜೈಲು ಸೇರಿದ್ದರು. ಶ್ರೀಶಾಂತ್ ಗೆ ಕೋರ್ಟ್ ಕ್ಲೀನ್ ಚಿಟ್ ನೀಡಿದ್ದರೂ ಬಿಸಿಸಿಐ ಮಾತ್ರ ಅಜೀವ ನಿಷೇಧವನ್ನು ತೆರವುಗೊಳಿಸಿಲ್ಲ.
ಶ್ರೀಶಾಂತ್ ಜೈಲಿನಿಂದ ಹೊರಬಂದ ಬಳಿಕ ಸಿನಿಮಾ, ಡ್ಯಾನ್ಸ್ ಮತ್ತು ರಾಜಕೀಯ ಸೇರಿದಂತೆ ಬಹುತೇಕ ಎಲ್ಲಾ ಕ್ಷೇತ್ರದಲ್ಲೂ ಅಗ್ನಿಪರೀಕ್ಷೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


