‘ಪಿಎಂ ನರೇಂದ್ರ ಮೋದಿ’ ಚಿತ್ರಕ್ಕಿದ್ದ ವಿಘ್ನ ನಿವಾರಣೆ: ಬಿಡುಗಡೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ
ವಿವೆಕ್ ಒಬೆರಾಯ್ ಅಭಿನಯದ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ "ಪಿಎಂ ನರೇಂದ್ರ ಮೋದಿ" ಚಿತ್ರ ಬಿಡುಗಡೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ.

Published On :
ನವದೆಹಲಿ: ವಿವೆಕ್ ಒಬೆರಾಯ್ ಅಭಿನಯದ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ "ಪಿಎಂ ನರೇಂದ್ರ ಮೋದಿ" ಚಿತ್ರ ಬಿಡುಗಡೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ.ಚಲನಚಿತ್ರ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆಯೇ ಎಂದು ನಿರ್ಧರಿಸುವುದು ಚುನಾವಣಾ ಆಯೋಗದ ಜವಾಬ್ದಾರಿ ಎಂಬುದಾಗಿ ನ್ಯಾಯಾಲಯ ಹೇಳಿದೆ.
ಚಿತ್ರಕ್ಕೆ ಸೆನ್ಸಾರ್ ಮಂಡಳಿ ಇನ್ನೂ ಪ್ರಮಾಣಪತ್ರ ನೀಡಿಲ್ಲ ಹಾಗಾಗಿ ಚಿತ್ರ ಬಿಡುಗಡೆಯ ವಿಚಾರವಾಗಿ ತಾನು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಸೋಮವಾರ ಕೋರ್ಟ್ ಸೂಚಿಸಿತ್ತು. ಇಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠವು ಕಾಂಗ್ರೆಸ್ ನ ಕಾರ್ಯಕರ್ತ ಅಮನ್ ಪನ್ವಾರ್ ಅವರ ಅರ್ಜಿಯನ್ನು ತಿರಸ್ಕರಿಸಿತು.
"ನಾವು ಚಲನಚಿತ್ರವನ್ನು ನೋಡಿಲ್ಲ. ಚಿತ್ರದ ವಿಷಯಗಳನ್ನು ನಾವು ತಿಳಿದಿಲ್ಲ. ನಮಗೇನೂ ಗೊತ್ತಿಲ್ಲದೆ ನಾವು ಹೇಗೆ ಚಿತ್ರ ಬಿಡುಗಡೆಗೆ ತಡೆ ನೀಡುವುದು?ಮುಖ್ಯ ನ್ಯಾಯಮೂರ್ತಿ ಗೊಗೊಯ್ ಪ್ರಶ್ನಿಸಿದ್ದಾರೆ.
With all your blessings, support and love,today we have won in the Honorable Supreme Court! A humble thank you to all of you and to the Indian juidiciary
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtNarendra Modiನರೇಂದ್ರ ಮೋದಿPM Narendra ModiIವಿವೇಕ್ ಒಬೆರಾಯ್Vivek Oberoಪಿಎಂ ನರೇಂದ್ರ ಮೋದಿ ಸುಪ್ರೀಂ ಕೋರ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


