'ಉರಿ' ಚಿತ್ರದ ನಟ ನವತೇಜ್ ಹುಂದಾಲ್ ನಿಧನ
ಬಾಲಿವುಡ್ ಬಾಕ್ಸ್ ಆಫೀಸಲ್ಲಿ ಭರ್ಜರಿ ಸೌಂಡ್ ಮಾಡಿದ್ದ 'ಉರಿ: ದಿ ಸರ್ಜಿಕಲ್ ಸ್ಟ್ರೈಕ್' ನವತೇಜ್ ಹುಂದಾಲ್ ಅವರು ಸೋಮವಾರ ಸಂಜೆ ನಿಧನರಾಗಿದ್ದಾರೆ.

Published On :
ಮುಂಬೈ: ಬಾಲಿವುಡ್ ಬಾಕ್ಸ್ ಆಫೀಸಲ್ಲಿ ಭರ್ಜರಿ ಸೌಂಡ್ ಮಾಡಿದ್ದ 'ಉರಿ: ದಿ ಸರ್ಜಿಕಲ್ ಸ್ಟ್ರೈಕ್' ನವತೇಜ್ ಹುಂದಾಲ್ ಅವರು ಸೋಮವಾರ ಸಂಜೆ ನಿಧನರಾಗಿದ್ದಾರೆ.
ವಿಕಿ ಕೌಶಾಲ್, ಮೋಹಿತ್ ರಾಣಾ, ಯಾಮಿ ಗೌತಮ್ ಅಭಿನಯದ ಉರಿ ಚಿತ್ರದಲ್ಲಿ ಗೃಹ ಸಚಿವರ ಪಾತ್ರ ಮಾಡಿದ್ದ ನವತೇಜ್ ಹುಂದಾಲ್ ಅವರ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ನವತೇಜ್ ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರ ಪುತ್ರಿಯರಲ್ಲಿ ಒಬ್ಬರಾಗಿರುವ ಆವಂತಿಕಾ ಹುಂದಾಲ್ ಅವರು ಏಕತಾ ಕಪೂರ್ ಅವರ ಜನಪ್ರಿಯ ಟಿವಿ ಶೋ “ಯೇ ಹೈ ಮೊಹಬ್ಬತೇಂ’ ಯಲ್ಲಿ ಮಿಹಿಕಾ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
ನವತೇಜ್ ಅವರ ನಿಧನಕ್ಕೆ ಸಿನಿ ಮತ್ತು ಟಿವಿ ಕಲಾವಿದರ ಸಂಘಟನೆ (CINTAA) ತನ್ನ ಅಧಿಕೃತ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


