ಹಿಂದಿ ಬಿಗ್ ಬಾಸ್ ನಿಂದ ಹೊರನಡೆದ ಸಲ್ಮಾನ್ ಖಾನ್: ಕಾರ್ಯಕ್ರಮಕ್ಕೆ ಹೊಸ ನಿರೂಪಕಿ!
ಹಿಂದಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೊಸ ನಿರೂಪಕಿ ಎಂಟ್ರಿ ಕೊಟ್ಟಿದ್ದು, ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಶೋಯಿಂದ ಹೊರ ಬಂದಿದ್ದಾರೆ.

ಹಿಂದಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೊಸ ನಿರೂಪಕಿ ಎಂಟ್ರಿ ಕೊಟ್ಟಿದ್ದು, ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಶೋಯಿಂದ ಹೊರ ಬಂದಿದ್ದಾರೆ.
ಅನಾರೋಗ್ಯದಿಂದ ಸಲ್ಮಾನ್ ಖಾನ್ ಬಳಲುತ್ತಿದ್ದು, ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಲ್ಮಾನ್ ಬಿಗ್ ಬಾಸ್ ಕಾರ್ಯಕ್ರಮದಿಂದ ಹೊರ ಬರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.
ಸಲ್ಮಾನ್ ನರವೈಜ್ಞಾನಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಕೋಪ ಮಾಡಿಕೊಳ್ಳದಂತೆ ವೈದ್ಯರು ಸಲಹೆ ನೀಡಿದ್ದಾರೆ. ಆದರೆ ಪ್ರತಿವಾರ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸಲ್ಮಾನ್ ಸ್ಪರ್ಧಿಗಳ ವಿರುದ್ಧ ಕೋಪ ಮಾಡಿಕೊಳ್ಳುತ್ತಾರೆ. ಹಾಗಾಗಿ ಸಲ್ಮಾನ್ ಈ ಕಾರ್ಯಕ್ರಮದಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ.
ನಿರ್ದೇಶಕಿ, ನಿರ್ಮಾಪಕಿ ಫರ್ಹಾ ಖಾನ್ ಬಿಗ್ ಬಾಸ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಂದಿನ ವಾರಗಳಲ್ಲಿ ಫರ್ಹಾ ಖಾನ್ ಬಿಗ್‍ಬಾಸ್ ನಿರೂಪಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯಕ್ಕೆ ಹಿಂದಿ ಬಿಗ್‍ಬಾಸ್‍ನ 13ನೇ ಆವೃತ್ತಿ ನಡೆಯುತ್ತಿದ್ದು, ಜನವರಿ ತಿಂಗಳಿನಿಂದ ಫರ್ಹಾ ಖಾನ್ ಕಾರ್ಯಕ್ರಮವನ್ನು ನಿರೂಪಣೆ ಮಾಡಲಿದ್ದಾರೆ.
ತಮ್ಮ ಜನ್ಮ ದಿನಾಚರಣೆಯನ್ನು ಬಿಗ್ ಬಾಸ್ ವೇದಿಕೆಯಲ್ಲಿ ಆಚರಿಸಿಕೊಳ್ಳಲು ಸಲ್ಮಾನ್ ನಿರ್ಧರಿಸಿದ್ದರು, ಆದರೆ ಅನಾರೋಗ್ಯದ ಕಾರಣದಿಂದ ಶೋ ನಿಂದ ಹೊರ ಬಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


