ಬಾಲಿವುಡ್

ಫೋರ್ಬ್ಸ್ ಸೆಲೆಬ್ರಿಟಿ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದ ಅಕ್ಕಿ, ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ, ಸಲ್ಮಾನ್

2019ನೇ ಸಾಲಿನ ಟಾಪ್ 100 ಭಾರತೀಯ​ ಸೆಲೆಬ್ರಿಟಿ ಪಟ್ಟಿಯನ್ನು ಫೋರ್ಬ್ಸ್ ಗುರುವಾರ ಬಿಡುಗಡೆ ಮಾಡಿದ್ದು, ಈ ಬಾರಿ ಬಾಲಿವುಡ್ ನಟ ಅಕ್ಷಯ್ ಅವರು ಸೂಪರ್ ಸ್ಟಾರ್ ಸಲ್ಮಾನ್​ ಖಾನ್ ಅವರನ್ನು ಹಿಂದಿಕ್ಕಿ​ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

ಫೋರ್ಬ್ಸ್ ಸೆಲೆಬ್ರಿಟಿ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದ ಅಕ್ಕಿ, ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ, ಸಲ್ಮಾನ್
ಸಲ್ಮಾನ್ ಖಾನ್ - ವಿರಾಟ್ ಕೊಹ್ಲಿ - ಅಕ್ಷಯ್ ಕುಮಾರ್
Published On :

ಮುಂಬೈ: 2019ನೇ ಸಾಲಿನ ಟಾಪ್ 100 ಭಾರತೀಯ​ ಸೆಲೆಬ್ರಿಟಿ ಪಟ್ಟಿಯನ್ನು ಫೋರ್ಬ್ಸ್ ಗುರುವಾರ ಬಿಡುಗಡೆ ಮಾಡಿದ್ದು, ಈ ಬಾರಿ ಬಾಲಿವುಡ್ ನಟ ಅಕ್ಷಯ್ ಅವರು ಸೂಪರ್ ಸ್ಟಾರ್ ಸಲ್ಮಾನ್​ ಖಾನ್ ಅವರನ್ನು ಹಿಂದಿಕ್ಕಿ​ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

ಅಕ್ಷಯ್ ಕುಮಾರ್ ಅವರು ವಾರ್ಷಿಕ 293.25 ಕೋಟಿ ರೂಪಾಯಿ ಆದಾಯ ಗಳಿಸುವ ಮೂಲಕ ಫೋರ್ಬ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು 252.72 ಕೋಟಿ ಆದಾಯದೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಅಕ್ಷಯ್ ಕುಮಾರ್ ಅವರು ಸಿನಿಮಾ, ಉತ್ಪನ್ನಗಳ ಪ್ರಚಾರ ಮೊದಲಾದವುಗಳಿಂದ ಒಟ್ಟು 293.25 ಕೋಟಿ ರೂ. ಆದಾಯ ಗಳಿಕೆ ಮಾಡಿದ್ದಾರೆ. ಈ ಮೂಲಕ ಅವರು ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇನ್ನು ಕಳೆದ ಬಾರಿ ಮೊದಲ ಸ್ಥಾನದಲ್ಲಿದ್ದ ಸಲ್ಮಾನ್ ಖಾನ್ ಅವರು, ಈ ಬಾರಿ 229.25 ಕೋಟಿ ರೂಪಾಯಿ ಆದಾಯ ಗಳಿಸುವ ಮೂಲಕ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ಪಟ್ಟಿಯಲ್ಲಿ ಮೆಗಾ ಸ್ಟಾರ್ ಅಮಿತಾಭ್ ಬಚ್ಚನ್ ಅವರು ನಾಲ್ಕನೆ ಸ್ಥಾನ ಪಡೆದರೆ, ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಎಂ.ಎಸ್​.ಧೋನಿ ಐದನೇ ಸ್ಥಾನ ಪಡೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.