ಬಾಲಿವುಡ್

ತಪ್ಪು ಸಂದೇಶ ಕೊಡುವ 'ಗುಡ್ ನ್ಯೂಸ್' ಚಿತ್ರಕ್ಕೆ ತಡೆಯಾಜ್ಞೆ ಕೋರಿ ಹೈಕೋರ್ಟ್ ಗೆ ಅರ್ಜಿ

ಬಾಲಿವುಡ್ ನಟರಾದ ಅಕ್ಷಯ್ ಕುಮಾರ್ ಹಾಗೂ ಕರೀನಾ ಕಪೂರ್ ಅಭಿನಯದ ‘ಗುಡ್ ನ್ಯೂಸ್‘ ಹಿಂದಿ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.

ತಪ್ಪು ಸಂದೇಶ ಕೊಡುವ 'ಗುಡ್ ನ್ಯೂಸ್' ಚಿತ್ರಕ್ಕೆ ತಡೆಯಾಜ್ಞೆ ಕೋರಿ ಹೈಕೋರ್ಟ್ ಗೆ ಅರ್ಜಿ
ಗುಡ್ ನ್ಯೂಸ್
Published On :

ಬೆಂಗಳೂರು: ಬಾಲಿವುಡ್ ನಟರಾದ ಅಕ್ಷಯ್ ಕುಮಾರ್ ಹಾಗೂ ಕರೀನಾ ಕಪೂರ್ ಅಭಿನಯದ ‘ಗುಡ್ ನ್ಯೂಸ್‘ ಹಿಂದಿ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.

ಸಮೀಮ್ ರಝಾ ಎಂಬುವರು ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಆದರೆ, ನ್ಯಾಯಪೀಠ, ಡಿ. 27ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿ ವಿಚಾರಣೆಯನ್ನು ಮುಂದೂಡಿತು.

ಕೃತಕ ಗರ್ಭಧಾರಣೆ ಚಿಕಿತ್ಸೆಯ ಕಥಾವಸ್ತು ಹೊಂದಿರುವ ಚಿತ್ರದಲ್ಲಿ ‘ಇಂದಿರಾ ಐವಿಎಫ್‘ ಎಂಬ ಸಂಸ್ಥೆ ಹೊರತುಪಡಿಸಿ ಉಳಿದ ಸಂಸ್ಥೆಗಳಲ್ಲಿ ಸರಿಯಾದ ಚಿಕಿತ್ಸೆ ದೊರೆಯುವುದಿಲ್ಲ ಎನ್ನುವ ಅರ್ಥ ಕೊಡುವಂತಹ ಸಂಭಾಷಣೆಯಿದೆ. ಇದು ಜನರಿಗೆ ಐವಿಎಫ್ ಚಿಕಿತ್ಸೆ ಬಗ್ಗೆ ತಪ್ಪು ಸಂದೇಶ ನೀಡುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.