ತಮ್ಮ ಮಕ್ಕಳನ್ನು ಟ್ರೋಲ್ ಮಾಡುತ್ತಿದ್ದವರ ವಿರುದ್ಧ ಸಿಡಿದ ಅಜಯ್ ದೇವಗನ್!
ಬಾಲಿವುಡ್ ನಟ ಅಜಯ್ ದೇವಗನ್ ಪುತ್ರಿ ನೈಸಾ ಧರಿಸಿದ್ದ ಉಡುಪಿನ ಬಗ್ಗೆ ನೆಟಿಗರು ಟ್ರೋಲ್ ಮಾಡುತ್ತಿದ್ದು ಇವರ ವಿರುದ್ಧ ಅಜಯ್ ಗರಂ ಆಗಿದ್ದಾರೆ.

Published On :
ಮುಂಬೈ: ಬಾಲಿವುಡ್ ನಟ ಅಜಯ್ ದೇವಗನ್ ಪುತ್ರಿ ನೈಸಾ ಧರಿಸಿದ್ದ ಉಡುಪಿನ ಬಗ್ಗೆ ನೆಟಿಗರು ಟ್ರೋಲ್ ಮಾಡುತ್ತಿದ್ದು ಇವರ ವಿರುದ್ಧ ಅಜಯ್ ಗರಂ ಆಗಿದ್ದಾರೆ.
ಅಜಯ್ ದೇವಗನ್ ಹಾಗೂ ಕಾಜೋಲ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಹಿರಿಯ ಮಗಳು 15 ವರ್ಷದ ನೈಸಾ ಹಾಗೂ 8 ವರ್ಷದ ಯುಗ್. ಇವರನ್ನು ಟ್ರೋಲ್ ಮಾಡುತ್ತಿರುವುದಕ್ಕೆ ಅಜಯೇ ಗರಂ ಆಗಿದ್ದು ನೀವು ಬೇಕಾದರೆ ನನ್ನ ಮತ್ತು ಕಾಜೋಲ್ ಬಗ್ಗೆ ಜಡ್ಜ್ ಮಾಡಿ. ಅದನ್ನು ಬಿಟ್ಟು ನಮ್ಮ ಮಕ್ಕಳನ್ನು ಜಡ್ಜ್ ಮಾಡಬೇಡಿ. ನಾನು ಹಾಗೂ ಕಾಜೋಲ್ ಕಲಾವಿದರಾದ ಕಾರಣ ನಮ್ಮ ಮಕ್ಕಳು ಕ್ಯಾಮೆರಾಗೆ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ನೈಸಾ ವಿಮಾನ ನಿಲ್ದಾಣದಲ್ಲಿ ತುಂಡುಡುಗೆ ತೊಟ್ಟು ಕಾಣಿಸಿಕೊಂಡಿದ್ದರು. ಇದಕ್ಕೆ ನೆಟಿಗರು ಟ್ರೋಲ್ ಮಾಡುತ್ತಿದ್ದರು. ಇದಕ್ಕೆ ಅಜಯ್ ಒಬ್ಬರ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ. ನಾನು ಬೇರೆ ವ್ಯಕ್ತಿಗಳ ಬಗ್ಗೆ ಮಾತನಾಡಲು ಶುರು ಮಾಡಿದರೆ, ಆ ವ್ಯಕ್ತಿ ಹೇಗೆ ಬೇಸರವಾಗುತ್ತೋ, ಹಾಗೆ ನನ್ನ ಮಕ್ಕಳಿಗೂ ಬೇಸರವಾಗುತ್ತೆ. ನಿಜ ಹೇಳಬೇಕೆಂದರೆ ನಾನು ಟ್ರೋಲ್ ಮಾಡುವ ವ್ಯಕ್ತಿಗಳ ಬಗ್ಗೆ ಯೋಚಿಸುವುದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


