ದೀಪಿಕಾ ಪಡುಕೋಣೆಯ ಬಹು ನಿರೀಕ್ಷಿತ 'ಚಪಾಕ್' ಚಿತ್ರದ ಫಸ್ಟ್ ಲುಕ್ ಬಿಡುಗಡೆ
ಆಸಿಡ್ ಸಂತ್ರಸ್ತೆ ಸಾಮಾಜಿಕ ಕಾರ್ಯಕರ್ತೆ ಲಕ್ಷ್ಮಿ ಅಗರ್ವಾಲ್ ಅವರ ಬದುಕಿನ ಕಥೆಯಾಧಾರಿತ ಚಿತ್ರ ಚಪಾಕ್...

Published On :
ಆಸಿಡ್ ಸಂತ್ರಸ್ತೆ ಸಾಮಾಜಿಕ ಕಾರ್ಯಕರ್ತೆ ಲಕ್ಷ್ಮಿ ಅಗರ್ವಾಲ್ ಅವರ ಬದುಕಿನ ಕಥೆಯಾಧಾರಿತ ಚಿತ್ರ ಚಪಾಕ್ ನಲ್ಲಿ ದೀಪಿಕಾ ಪಡುಕೋಣೆ ಅಭಿನಯಿಸುತ್ತಿದ್ದಾರೆ ಎಂದು ಈ ಹಿಂದೆ ಸುದ್ದಿಯಾಗಿತ್ತು. ಅದರ ತಯಾರಿ ಆರಂಭವಾಗಿದ್ದು, ದೀಪಿಕಾರ ನೋಟ ಹೇಗಿರುತ್ತದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಆ ದಿನ ಬಂದೇಬಿಟ್ಟಿದೆ.
ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ದೀಪಿಕಾ ಇಲ್ಲಿ ಮಾಲ್ಟಿ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂದಿನಿಂದ ಶೂಟಿಂಗ್ ಆರಂಭವಾಗಲಿದೆ. ಸ್ವತಃ ದೀಪಿಕಾ ಚಿತ್ರದ ಫಸ್ಟ್ ಲುಕ್ ನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಾಕಿಕೊಂಡಿದ್ದಾರೆ. ಈ ಹಿಂದೆ ಅವರು ಚಪಾಕ್ ಚಿತ್ರದ ತಯಾರಿಯಲ್ಲಿ, ಗಾಢ ಚರ್ಚೆಯಲ್ಲಿ ತೊಡಗಿರುವ ಚಿತ್ರವನ್ನು ಶೇರ್ ಮಾಡಿಕೊಂಡಿದ್ದರು.
ಮೇಘನಾ ಗುಲ್ಜಾರ್ ನಿರ್ದೇಶನದ ಚಪಾಕ್ ಚಿತ್ರಕ್ಕೆ ದೀಪಿಕಾ ಅವರು ಸಹ ಫಾಕ್ಸ್ ಸ್ಟಾರ್ ಸ್ಟುಡಿಯೊ ಜೊತೆ ಬಂಡವಾಳ ಹೂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Deepika Padukoneದೀಪಿಕಾ ಪಡುಕೋಣೆAcid survivorChhapaakLakshmi Agarwalಆಸಿಡ್ ಸಂತ್ರಸ್ತೆಚಪಾಕ್ಲಕ್ಷ್ಮಿ ಅಗರ್ವಾಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


