ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ವದಂತಿ ತಳ್ಳಿಹಾಕಿದ ಸಂಜಯ್ ದತ್
ಬಾಲಿವುಡ್ ನಟ ಸಂಜಯ್ ದತ್ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ತಾವು ಚುನಾವಣೆಗೆ....

Published On :
ಮುಂಬೈ: ಬಾಲಿವುಡ್ ನಟ ಸಂಜಯ್ ದತ್ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಾಲಿವುಡ್ ಬಾಬಾ ಅಲಿಯಾಸ್ ಸಂಜಯ್ ದತ್ ಅವರು ತಮ್ಮ ತಂದೆ ನಟ, ಕಾಂಗ್ರೆಸ್ ಸಂಸದರಾಗಿದ್ದ ದಿ. ಸುನಿಲ್ ದತ್ ಅವರ ಹಾದಿ ತುಳಿಯಲಿದ್ದು, ಘಾಜಿಯಾಬಾದ್ ನಿಂದ ಚುನಾವಣಾ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ನಾನು ಚುನವಾಣೆಗೆ ಸ್ಪರ್ಧಿಸುವುದು ಕೇವಲ ವದಂತಿ. ಅದು ಸತ್ಯವಲ್ಲ. ಚುನಾವಣೆಗೆ ಸ್ಪರ್ಧಿಸುತ್ತಿರುವ ನನ್ನ ಸಹೋದರಿ, ಕಾಂಗ್ರೆಸ್ ಸಂಸದೆ ಪ್ರಿಯಾ ದತ್ ಅವರಿಗೆ ನನ್ನ ಬೆಂಬಲವಿದೆ ಎಂದು ಸಂಜಯ್ ದತ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಬೇಕು ಎಂದು ದತ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


