ಅಜಯ್ ದೇವಗನ್ ತಂದೆ ಸಾಹಸ ನಿರ್ದೇಶಕ ವೀರೂ ದೇವಗನ್ ನಿಧನ
ಬಾಲಿವುಡ್ ನಟ ಅಜಯ್ ದೇವಗನ್ ಅವರ ತಂದೆ ಹಾಗೂ ನಿರ್ದೇಶಕ ವೀರೂ ದೇವಗನ್ ಇಂದು ನಿಧನ ಹೊಂದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಮುಂಬೈ: ಬಾಲಿವುಡ್ ನಟ ಅಜಯ್ ದೇವಗನ್ ಅವರ ತಂದೆ ಹಾಗೂ ನಿರ್ದೇಶಕ ವೀರೂ ದೇವಗನ್ ಇಂದು ನಿಧನ ಹೊಂದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರು ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಂಜೆ 6 ಘಂಟೆ ಸುಮಾರಿನಲ್ಲಿ ವಿಲೇ ಪಾರ್ಲ್ ಘಾಟ್ ನಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಿತು ಎಂದು ಕುಟುಂಬ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
ವೀರೂ ದೇವಗನ್, ಸುಮಾರು 80ಕ್ಕೂ ಅಧಿಕ ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ನಟ ಅಮಿತಾಬ್ ಬಚ್ಚನ್ ಹಾಗೂ ಅಜಯ್ ದೇವಗನ್ ಅಭಿನಯದ 'ಹಿಂದೂಸ್ತಾನ ಕೀ ಕಸಮ್' ಚಿತ್ರವನ್ನು ಕೂಡ ನಿರ್ದೇಶಿಸಿದ್ದು ಅವರೇ. ಅಲ್ಲದೇ, 'ಕ್ರಾಂತಿ', 'ಸೌರಭ್' ಹಾಗೂ 'ಸಿಂಹಾಸನ್' ಚಿತ್ರಗಳ ಸಣ್ಣ ಪಾತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


