ಬಾಲಿವುಡ್

ಶೂಟಿಂಗ್ ವೇಳೆ ಕುಸಿದು ಬಿದ್ದ 'ಗಂದಿ ಬಾತ್' ನಟಿ!

ಗಂದಿ ಬಾತ್ ನಟಿ ಗೆಹನಾ ವಸಿಷ್ಠ ಚಿತ್ರೀಕರಣ ವೇಳೆ ಕುಸಿದು ಬಿದ್ದಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶೂಟಿಂಗ್ ವೇಳೆ ಕುಸಿದು ಬಿದ್ದ 'ಗಂದಿ ಬಾತ್' ನಟಿ!
ಗೆಹನಾ ವಸಿಷ್ಠ
Published On :

ಮುಂಬೈ: ಗಂದಿ ಬಾತ್ ನಟಿ ಗೆಹನಾ ವಸಿಷ್ಠ ಚಿತ್ರೀಕರಣ ವೇಳೆ ಕುಸಿದು ಬಿದ್ದಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ವೆಬ್ ಸರಣಿಯೊಂದರಲ್ಲಿ ಗೆಹನಾ ನಿರಂತರವಾಗಿ ಶೂಟಿಂಗ್ ನಲ್ಲಿ ಭಾಗಿಯಾಗಿದ್ದು ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದರು. ಅವರನ್ನು ಪರೀಕ್ಷಿಸಿದ ವೈದ್ಯರು ಸರಿಯಾದ ಪೌಷ್ಠಿಕಾಂಶದ ಆಹಾರ ಮತ್ತು ವಿಶ್ರಾಂತಿ ಇಲ್ಲದೇ ಇದ್ದುದ್ದರಿಂದ ಹೃದಯಾಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

Story image

ಮುಂಬೈನ ರಕ್ಷಾ ಆಸ್ಪತ್ರೆಯಲ್ಲಿ ಗೆಹನಾಗೆ ಚಿಕಿತ್ಸೆ ನೀಡಲಾಗುತ್ತಿದ್ದು ಉಸಿರಾಟಕ್ಕಾಗಿ ಅವರಿಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. 

Story image

ಗೆಹನಾ ಕಿರುತೆರೆಯಲ್ಲಿ ನಿರೂಪಕಿಯಾಗಿ ಕೆಲವು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದರು. ಅದರ ಜೊತೆಗೆ ಸುಮಾರು 70ಕ್ಕೂ ಹೆಚ್ಚು ಅಧಿಕ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.