ಬಾಲಿವುಡ್

ಸಲ್ಮಾನ್ ಖಾನ್ ಬಿಗ್ ಬಾಸ್ ಗೆ ಸಂಕಷ್ಟ: ಶೋ ನಿಷೇಧಿಸುವಂತೆ ಬಿಜೆಪಿ ಶಾಸಕನ ಪತ್ರ

ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುವ ರಿಯಾಲಿಟಿ ಶೋ ಬಿಗ್ ಬಾಸ್ ಗೆ ಸಂಕಷ್ಟ ಎದುರಾಗಿದೆ, ಗಾಜಿಯಾಬಾದ್ ಬಿಜೆಪಿ ಶಾಸಕ ನಂದ ಕಿಶೋರ್ ಗುಜ್ಜಾರ್ ಕಾರ್ಯಕ್ರಮ ರದ್ದುಗೊಳಿಸುವಂತೆ ಕೋರಿದ್ದಾರೆ.

ಸಲ್ಮಾನ್ ಖಾನ್ ಬಿಗ್ ಬಾಸ್ ಗೆ ಸಂಕಷ್ಟ: ಶೋ ನಿಷೇಧಿಸುವಂತೆ ಬಿಜೆಪಿ ಶಾಸಕನ ಪತ್ರ
ಸಂಗ್ರಹ ಚಿತ್ರ
Published On :

ಲಕ್ನೋ: ಬಾಲಿವುಡ್ ನಟ ಸಲ್ಮಾನ್ ಖಾನ್  ನಡೆಸಿಕೊಡುವ ರಿಯಾಲಿಟಿ ಶೋ ಬಿಗ್ ಬಾಸ್ ಗೆ ಸಂಕಷ್ಟ ಎದುರಾಗಿದೆ, ಗಾಜಿಯಾಬಾದ್ ಬಿಜೆಪಿ ಶಾಸಕ ನಂದ ಕಿಶೋರ್ ಗುಜ್ಜಾರ್ ಕಾರ್ಯಕ್ರಮ ರದ್ದುಗೊಳಿಸುವಂತೆ ಕೋರಿದ್ದಾರೆ. 

ಬಿಗ್ ಬಾಸ್ ಶೋ ನಿಷೇಧಿಸುವಂತೆ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದಿದ್ದಾರೆ.

ಕಾರ್ಯಕ್ರಮವನ್ನು ಎಲ್ಲಾ ವಯೋಮಾನದವರೂ ವೀಕ್ಷಿಸುವ ಕಾರಣ ಪ್ರಸಾರಕ್ಕೂ ಮುನ್ನ ಸೆನ್ಸಾರ್ ಆಗಲೇಬೇಕು ಎಂದು ಪತ್ರದಲ್ಲಿ ತಿಳಿಸಿದೆ.  ಅಶ್ಲೀಲ, ಅಸಭ್ಯ, ಪೋಲಿತನಕ್ಕೆ ಕೇರ್ ಆಫ್ ಅಡ್ರೆಸ್‌ನಂತಾಗಿದೆ, "ನಮ್ಮ ದೇಶ ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಒಳಗೊಂಡಿದೆ. ಟಿಆರ್‌ಪಿ ಹಾಗೂ ಲಾಭಾಪೇಕ್ಷೆಗಾಗಿ ಇವನ್ನೆಲ್ಲಾ ಗಾಳಿಗೆ ತೂರಲಾಗುತ್ತಿದೆ ಎಂದು ಬರೆದಿದ್ದಾರೆ.

ಬಿಗ್ ಬಾಸ್ ಶೋ ನಿಷೇಧಿಸುವವರೆಗೂ ತಾವು ಯಾವುದೇ ರೀತಿಯ ಧಾನ್ಯದಿಂದ ತಯಾರಿಸಿದ ಆಹಾರ ಸೇವಿಸುವುದಿಲ್ಲ, ಕೇವಲ ಹಣ್ಣುಗಳನ್ನು ಮಾತ್ರ ಸೇವಿಸುವುದಾಗಿ ಉತ್ತರ ಪ್ರದೇಶ ನವ ನಿರ್ಮಾಣ ಸೇನೆ ಅಧ್ಯಕ್ಷ ಅಮಿತ್ ಜೈನ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.