ತಮ್ಮ ಹಿಂಭಾಗ ಮುಟ್ಟಿದ್ದ ಬೋನಿ ಕಪೂರ್ ವಿಡಿಯೋ ವೈರಲ್, ಜಾಲತಾಣಗಳ ವಿರುದ್ಧ 'ಐರಾವತ'ನ ಬೆಡಗಿ ಊರ್ವಶಿ ಗರಂ, ವಿಡಿಯೋ!
ಮದುವೆ ಸಮಾರಂಭದ ವೇಳೆ ಬಾಲಿವುಡ್ ನ ಹಿರಿಯ ನಿರ್ಮಾಪಕ ಬೋನಿ ಕಪೂರ್ ತಮ್ಮ ಹಿಂಭಾಗ ಮುಟ್ಟಿದ್ದರು. ಈ ವಿಡಿಯೋ ವೈರಲ್ ಮಾಡಿದ್ದ ಸಾಮಾಜಿಕ ಜಾಲತಾಣಗಳ ವಿರುದ್ಧ ಐದು ತಿಂಗಳ ಬಳಿಕ ಇದೀಗ ಐರಾವತ ಬೆಡಗಿ ಊರ್ವಶಿ ರೌಟೇಲಾ ಗರಂ ಆಗಿದ್ದಾರೆ.

ಮುಂಬೈ: ಮದುವೆ ಸಮಾರಂಭದ ವೇಳೆ ಬಾಲಿವುಡ್ ನ ಹಿರಿಯ ನಿರ್ಮಾಪಕ ಬೋನಿ ಕಪೂರ್ ತಮ್ಮ ಹಿಂಭಾಗ ಮುಟ್ಟಿದ್ದರು. ಈ ವಿಡಿಯೋ ವೈರಲ್ ಮಾಡಿದ್ದ ಸಾಮಾಜಿಕ ಜಾಲತಾಣಗಳ ವಿರುದ್ಧ ಐದು ತಿಂಗಳ ಬಳಿಕ ಇದೀಗ ಐರಾವತ ಬೆಡಗಿ ಊರ್ವಶಿ ರೌಟೇಲಾ ಗರಂ ಆಗಿದ್ದಾರೆ.

ಕಳೆದ ಏಪ್ರಿಲ್ ನಲ್ಲಿ ಮದುವೆ ಸಮಾರಂಭಕ್ಕೆ ಬಾಲಿವುಡ್ ಗಣ್ಯರು ಆಗಮಿಸಿದ್ದರು. ಈ ವೇಳೆ ಫೋಟೋ ತೆಗೆಸಿಕೊಳ್ಳುತ್ತಿದ್ದ ವೇಳೆ ಬೋನಿ ಕಪೂರ್ ಅವರು ಊರ್ವಶಿ ರೌಟೇಲಾ ಅವರ ಹಿಂಭಾಗವನ್ನು ಮುಟ್ಟಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಆದರೆ ಅಂದು ಇದಕ್ಕೆ ನಟಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಐದು ತಿಂಗಳ ಬಳಿಕ ಇದೀಗ ಬೇಸರ ವ್ಯಕ್ತಪಡಿಸಿದ್ದಾರೆ.

ಮದುವೆ ಕಾರ್ಯಕ್ರಮವ ವೇಳೆ ಬೋನಿ ಕಪೂರ್ ಅವರ ಕೈ ನನ್ನ ಹಿಂಭಾಗಕ್ಕೆ ಟಚ್ ಆಗಿತ್ತು. ಇದಕ್ಕೆ ನಾನು ಬೇರೆ ಅರ್ಥ ಕಲ್ಪಿಸಿರಲಿಲ್ಲ. ಆದರೆ ಬೆಳಗಾಗುವಷ್ಟರಲ್ಲಿ ವಿಡಿಯೋ ವೈರಲ್ ಆಗಿತ್ತು. ಇದರಿಂದ ನನಗೆ ತುಂಬಾ ಮುಜುಗರವಾಗಿತ್ತು. ಸತತ ಒಂದು ವಾರ ಇದೇ ವಿಚಾರವಾಗಿ ಪತ್ರಿಕೆ, ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿತ್ತು.

ಈ ವಿಚಾರವಾಗಿ ನಾನು ಬೋನಿ ಕಪೂರ್ ಅವರನ್ನು ವಿಚಾರಿಸಿದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡದೆ, ವಿಡಿಯೋವನ್ನು ಕೆಟ್ಟದಾಗಿ ಬಿಂಬಿಸಿದವರ ವಿರುದ್ಧ ಬೇಸರ ಹೊರಹಾಕಿದ್ದರು. ಬೋನಿ ಅವರ ಮೇಲೆ ನನಗೆ ಅಪಾರ ಗೌರವವಿದೆ. ಆದರೆ ಸಾಮಾಜಿಕ ಜಾಲತಾಣಗಳು ಮಾತ್ರ ಈ ವಿಡಿಯೋವನ್ನು ವೈರಲ್ ಮಾಡಿದ್ದಕ್ಕೆ ಊರ್ವಶಿ ಗರಂ ಆಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


