ಆತ್ಮಹತ್ಯೆಗೂ ಮುನ್ನ ಮೂರು ವಿಷಯಗಳ ಬಗ್ಗೆ ಗೂಗಲ್ ಸರ್ಚ್ ಮಾಡಿದ್ದ ನಟ ಸುಶಾಂತ್ ಸಿಂಗ್!
ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೂ ಮೊದಲು ಮೂರು ವಿಷಯಗಳನ್ನು ಗೂಗಲ್‌ನಲ್ಲಿ ಹುಡುಕಿದ್ದಾರೆ ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬಯಿ: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೂ ಮೊದಲು ಮೂರು ವಿಷಯಗಳನ್ನು ಗೂಗಲ್‌ನಲ್ಲಿ ಹುಡುಕಿದ್ದಾರೆ ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕಾರ ಅವರು ಕೆಲವು ಸಾಮಾನ್ಯ ಸುದ್ದಿಗಳನ್ನು ಹುಡುಕಿದ್ದಾರೆ, ತಮ್ಮ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಹೆಸರು ಹುಡುಕಿದ್ದಾರೆ ಅಷ್ಟೇ ಅಲ್ಲದೆ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ಲೇಖನಗಳನ್ನು ಹುಡುಕಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ಕೆಲ ಗಂಟೆಗಳ ಮೊದಲು ತನ್ನ ಹೆಸರನ್ನೂ ಗೂಗಲ್‌ನಲ್ಲಿ ಹುಡುಕಿದ್ದಾರೆ ಎನ್ನಲಾಗುತ್ತಿದೆ. ಸುಶಾಂತ್ ಅವರ ಲ್ಯಾಪ್‌ಟಾಪ್ ಹಾಗೂ ಮೊಬೈಲ್‌ನ ವಿಧಿವಿಜ್ಞಾನ ತನಿಖೆಯಿಂದ ಈ ಮಾಹಿತಿ ತಿಳಿದುಬಂದಿದೆ.
ಅವರ ಬ್ಯಾಂಕ್ ಖಾತೆಯ ಪರಿಶೀಲನೆಯ ಪ್ರಕಾರ 2.8 ಕೋಟಿ ಹಣವನ್ನು ಜಿಎಸ್‌ಟಿ ಮೂಲಕ ವರ್ಗಾವಣೆ ಮಾಡಲಾಗಿತ್ತು. ಸಿನಿಮಾ ಕ್ಷೇತ್ರದ 40 ಮಂದಿಯ ಹೇಳಿಕೆಗಳನ್ನು ಈ ಪ್ರಕರಣದಲ್ಲಿ ದಾಖಲಿಸಲಾಗಿದೆ.
ಮಾಜಿ ಮ್ಯಾನೇಜರ್ ದಿಶಾ ಸಾವಿನೊಂದಿಗೆ ಸುಶಾಂತ್ ಹೆಸರನ್ನು ತಳಕು ಹಾಕಲಾಗಿತ್ತು. ಆ ಕಾರಣಕ್ಕೆ ಸುಶಾಂತ್ ಮನನೊಂದಿದ್ದರು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


