ಬಾಲಿವುಡ್

ಸಂಜಯ್ ದತ್  ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಿಗಾಗಿ ಪ್ರಾರ್ಥಿಸಿ; ಮಾನ್ಯತಾ

ಬಾಲಿವುಡ್‌ ನಟ ಸಂಜಯ್‌ ದತ್‌ಗೆ (61 ವರ್ಷ) ಶ್ವಾಸಕೋಶ ಕ್ಯಾನ್ಸರ್‌ ಪತ್ತೆಯಾಗಿದ್ದು, ಮುಂಬೈನಲ್ಲೇ ಪ್ರಾಥಮಿಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪತ್ನಿ ಮಾನ್ಯತಾ ಸ್ಪಷ್ಟ ಪಡಿಸಿದ್ದಾರೆ.

ಸಂಜಯ್ ದತ್  ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಿಗಾಗಿ ಪ್ರಾರ್ಥಿಸಿ; ಮಾನ್ಯತಾ
ಸಂಜಯ್ ದತ್
Published On :

ಮುಂಬೈ: ಬಾಲಿವುಡ್‌ ನಟ ಸಂಜಯ್‌ ದತ್‌ಗೆ (61 ವರ್ಷ) ಶ್ವಾಸಕೋಶ ಕ್ಯಾನ್ಸರ್‌ ಪತ್ತೆಯಾಗಿದ್ದು, ಮುಂಬೈನಲ್ಲೇ ಪ್ರಾಥಮಿಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪತ್ನಿ ಮಾನ್ಯತಾ ಸ್ಪಷ್ಟ ಪಡಿಸಿದ್ದಾರೆ.

ಸಂಜುಬಾಬಾ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ 4ನೇ ಹಂತದಲ್ಲಿದ್ದು ಎಲ್ಲಾ ರೀತಿಯ ಪ್ರಾಥಮಿಕ ಚಿಕಿತ್ಸೆಯನ್ನು ಕೋಕಿಲಾ ಬೆನ್ ಧೀರುಭಾಯಿ ಆಸ್ಪತ್ರೆಯಲ್ಲಿ ನಿಯಮಿತ ಚಿಕಿತ್ಸೆ
ಪಡೆಯುತ್ತಿದ್ದಾರೆ. ಮುಂದಿನಹಂತದ ಚಿಕಿತ್ಸೆಗೆ ವಿದೇಶಕ್ಕೆ ತೆರಳುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಮಾನ್ಯತಾ ಹೇಳಿದ್ದಾರೆ.

ಸಂಜು ಜೀವನದಲ್ಲಿ ಸಾಕಷ್ಟು ಏಳು–ಬೀಳುಗಳನ್ನು ಕಂಡಿದ್ದಾರೆ, ಆದರೆ ಪ್ರತಿಯೊಂದು ಕಠಿಣ ಪರಿಸ್ಥಿತಿಯಲ್ಲಿಯೂ ಅವರಿಗೆ ಮುಂದೆ ಸಾಗುವಂತೆ ಮಾಡಿರುವುದು ನಿಮ್ಮ ಬೆಂಬಲ
ಮತ್ತು ಮೆಚ್ಚುಗೆ. ಅದಕ್ಕೆ ನಾವು ಸದಾ ಋಣಿಯಾಗಿರುತ್ತೇವೆ. ಈ ನಮಗೆ ಮತ್ತೊಂದು ಕಠಿಣ ಸವಾಲು ಮುಂದಿದೆ, ನೀವು ಅದೇ ಪ್ರೀತಿ ಮತ್ತು ಕಾಳಜಿಯನ್ನು ತೋರುವಿರೆಂದು
ನನಗೆ ಭರವಸೆಯಿದೆ. ಯಾವುದೇ ನಕಾರಾತ್ಮ ಯೋಚನೆಗಳಿಗೂ ಸರಿಯದೆ ಸಂಜುಗಾಗಿ ನಗುನಗುತ್ತ, ಸಹಜ ಬದುಕನ್ನು ಸಾಗಿಸಬೇಕಿದೆ. ಇದು ಸುದೀರ್ಘ ಪ್ರಯಾಣವಾಗಿರಲಿದೆ'
ಎಂದಿದ್ದಾರೆ. ಸಂಜಯ್‌ ದತ್ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ನಿಲ್ಲಿಸಿ ಹಾಗೂ ವೈದ್ಯರು ಅವರ ಕರ್ತವ್ಯ ನಿರ್ವಹಿಸಲು ಬಿಡಿ ಎಂದು ಕುಟುಂಬ ಮನವಿ ಮಾಡಿದೆ.

ಇತ್ತೀಚೆಗಷ್ಟೇ ಉಸಿರಾಟದ  ಸಮಸ್ಯೆಯಿಂದ ಬಾಂದ್ರಾದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ನಡೆಸಿದ ಹಲವು ಪರೀಕ್ಷೆಗಳಿಂದ ಕ್ಯಾನ್ಸರ್‌ ಇರುವುದು ಪತ್ತೆಯಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.