ಬಾಲಿವುಡ್ ಡ್ರಗ್ಸ್ ಪ್ರಕರಣ: ನಿರ್ಮಾಪಕ ಕರಣ್ ಜೋಹರ್‌ಗೆ ಎನ್‌ಸಿಬಿ ಸಮನ್ಸ್
ಬಾಲಿವುಡ್ ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗುರುವಾರ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್‌ಗೆ ಸಮನ್ಸ್ ಜಾರಿಗೊಳಿಸಿದೆ.

ಬಾಲಿವುಡ್ ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗುರುವಾರ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್‌ಗೆ ಸಮನ್ಸ್ ಜಾರಿಗೊಳಿಸಿದೆ.
ಹಿಂದಿ ಚಲನಚಿತ್ರೋದ್ಯಮದಲ್ಲಿ ಮಾದಕವಸ್ತು ಜಾಲದ ಬಗ್ಗೆ ಎನ್‌ಸಿಬಿ ತನಿಖೆ ನಡೆಸುತ್ತಿದ್ದು ಈ ಸಂಬಂಧ ಒರಮುಖ್ಯ ಮಾಹಿತಿ ಕಲೆ ಹಾಕಲು ನಿರ್ಮಾಪಕ ಕರಣ್ ಜೋಹರ್‌ಗೆ ಸಮನ್ಸ್ ನೀಡಿದೆ. ಆದರೆ ಅವರಿಗೆ ವಿಚಾರಣೆಗೆ ಹಾಜರಾಗಲು ದಿನಾಂಕವನ್ನ ಇನ್ನೂ ತಿಳಿಸಿಲ್ಲ
ಈ ಕ್ರಮ ಕಳೆದ ಎರಡು ತಿಂಗಳುಗಳಿಂದ ಎನ್‌ಸಿಬಿ ತೆರೆದಿಡಲು ಪ್ರಯತ್ನಿಸುತ್ತಿರುವ ಬಾಲಿವುಡ್-ಡ್ರಗ್ಸ್ ಮಾಫಿಯಾ ಲಿಂಕ್ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿದೆ. ಈ ವರ್ಷದ ಜೂನ್‌ನಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಅವರ ದುರಂತ ಸಾವಿನ ನಂತರ ಬಾಲಿವುಡ್ ನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಗಂಭೀರ ಆರೋಪಗಳು ಕೇಳಿಬರುತ್ತಿವೆ.
ಏತನ್ಮಧ್ಯೆ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬುಧವಾರ ನಟ ಅರ್ಜುನ್ ರಾಂಪಾಲ್ ಅವರನ್ನು ವಿಚಾರಣೆಗೆ ಆಹ್ವಾನಿಸಿತ್ತು. ಆದರೆ ನಟ ತಮಗೆ ಒಂದು ವಾರದ ಸಮಯವನ್ನು ನೀಡುವಂತೆ ಕೋರಿದ್ದಾರೆ ಎಂದು ಐಎಎನ್ಎಸ್ ವರದಿ ಮಾಡಿದೆ. ವೈಯುಕ್ತಿಕ ಕಾರಣದಿಂದಾಗಿ ವಾರದ ಕಾಲ ಸಮಯ ಕೇಳಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


