ಶಬಾನಾ ಅಜ್ಮಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಜನವರಿ 18 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಟಿ ಶಬಾನಾ ಅಜ್ಮಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಮುಂಬೈ: ಜನವರಿ 18 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಟಿ ಶಬಾನಾ ಅಜ್ಮಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ತನ್ನನ್ನು ನೋಡಿಕೊಂಡ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಗೆ ಧನ್ಯವಾದ ತಿಳಿಸಿದ ಶಬಾನಾ, ಶನಿವಾರ ಟ್ವಿಟರ್ ಮೂಲಕ ಈ ವಿಷಯ ಹಂಚಿಕೊಂಡಿದ್ದಾರೆ. ನಿಮ್ಮ ಪ್ರಾರ್ಥನೆ ಮತ್ತು ನನ್ನ ಚೇತರಿಕೆಗಾಗಿ ಎಲ್ಲರಿಗೂ ಧನ್ಯವಾದಗಳು. ನಾನು ಈಗ ಮನೆಗೆ ಮರಳಿದ್ದೇನೆ. ವೈದ್ಯರ ತಂಡ ಮತ್ತು ಶುಶ್ರೂಷಾ ಸಿಬ್ಬಂದಿ ಒದಗಿಸಿದ ರೈಕೆಗಾಗಿ ಟೀನಾ ಅಂಬಾನಿ ಮತ್ತು ಕೋಕಿಲಾಬೆನ್ ಅಂಬಾನಿ ಆಸ್ಪತ್ರೆಗೆ ಧನ್ಯವಾದಗಳು. ನಾನು ಋಣಿಯಾಗಿದ್ದೇನೆ ಮತ್ತು ಕೃತಜ್ಞಳಾಗಿದ್ದೇನೆ" ಎಂದು ಹೇಳಿಕೊಂಡಿದ್ದಾರೆ.
ಏತನ್ಮಧ್ಯೆ, ಸುದ್ದಿ ಕೇಳಿ ಸಂತೋಷಗೊಂಡ ಆಕೆಯ ಅಭಿಮಾನಿಗಳು ಮತ್ತು ಸ್ನೇಹಿತರು ಆಕೆಯ ಆರೋಗ್ಯಕ್ಕೆ ಶುಭ ಹಾರೈಸಿದ್ದಾರೆ. ಇತಿಹಾಸಕಾರ ರಾಣಾ ಸಫ್ವಿ, "ಮಾಶಾ ಅಲ್ಲಾಹ್. ನಿಮ್ಮನ್ನು ಚೆನ್ನಾಗಿ ಮತ್ತು ನಗುತ್ತಿರುವಂತೆ ನೋಡುವುದು ಒಳ್ಳೆಯದು. ಮತ್ತು ಈ ಭಾವಚಿತ್ರದಲ್ಲಿ ನಿಮ್ಮ ತಾಯಿಯನ್ನು ನೀವು ನನಗೆ ತುಂಬಾ ನೆನಪಿಸುತ್ತಿದ್ದೀರಿ" ಎಂದು ಟ್ವೀಟ್ ಮಾಡಿದ್ದಾರೆ. ನಟ ವಿಕ್ರಾಂತ್ ಮಾಸ್ಸಿ “ನಿಮ್ಮನ್ನು ಮರಳಿ ನೋಡುವುದಕ್ಕೆ ತುಂಬಾ ಸಂತೋಷವಾಗಿದೆ!” ಎಂದಿದ್ದಾರೆ.
ಕಳೆದ ತಿಂಗಳು ಮುಂಬೈ-ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತಕ್ಕೀಡಾದಾಗ 69 ವರ್ಷದ ನಟಿಯ ತಲೆಗೆ ಪೆಟ್ಟಾಗಿತ್ತು. ಪತಿ, ಗೀತರಚನೆಕಾರ ಜಾವೇದ್ ಅಖ್ತರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದರು. ನಟಿ ಮತ್ತು ಆಕೆಯ ಚಾಲಕ ಕಮಲೇಶ್ ಕಾಮತ್ ಅವರನ್ನು ನವೀ ಮುಂಬಯಿಯ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ನಂತರ ಅದೇ ದಿನ ಉಪನಗರ ಅಂಧೇರಿಯ ಕೋಕಿಲಾಬೆನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ದುಡುಕಿನ ಚಾಲನೆ ಮತ್ತು ನಿರ್ಲಕ್ಷ್ಯಕ್ಕಾಗಿ ಅಜ್ಮಿಯ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Thank you all for your prayers and wishes for my https://t.co/A21IxD7Usd back home now Thank you #Tina Ambani and Kokilaben Ambani hospital for the sterling care provided by the doctors team and the nursing staff. Im indebted and grateful
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


