ದೀಪಿಕಾ ಪಡುಕೋಣೆಗೆ ಸಲ್ಮಾನ್ ಖಾನ್ ಜೊತೆ ನಟಿಸುವಾಸೆ
ಬಾಲಿವುಡ್ ದಬಾಂಗ್ ಸ್ಟಾರ್ ಸಲ್ಮಾನ್ ಖಾನ್ ಅವರೊಂದಿಗೆ ನಟಿ ದೀಪಿಕಾ ಪಡುಕೋಣೆ ನಟಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ.

ಮುಂಬೈ: ಬಾಲಿವುಡ್ ದಬಾಂಗ್ ಸ್ಟಾರ್ ಸಲ್ಮಾನ್ ಖಾನ್ ಅವರೊಂದಿಗೆ ನಟಿ ದೀಪಿಕಾ ಪಡುಕೋಣೆ ನಟಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ.
ಇದುವರೆಗೂ ಸಲ್ಮಾನ್ ಹಾಗೂ ದೀಪಿಕಾ ಜೋಡಿಯಲ್ಲಿ ಯಾವುದೇ ಚಿತ್ರ ಹೊರಬಂದಿಲ್ಲ. ಸಲ್ಮಾನ್ ಜೊತೆಗೆ ತಮಗೆ ನಟಿಸುವ ಆಸೆ ಇದೆಯಾ ? ಎಂದು ದೀಪಿಕಾಗೆ ಸುದ್ದಿಗಾರರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ದೀಪಿಕಾ, ನನ್ನ ಅಭಿಮಾನಿಗಳು ಈ ವಿಚಾರದ ಬಗ್ಗೆ ತುಂಬಾ ಉತ್ಸುಕರಾಗಿದ್ದಾರೆ. ನಾನು ಸಲ್ಮಾನ್ ಒಟ್ಟಿಗೆ ಯಾವಾಗ ನಟಿಸುತ್ತಾರೆ ಎಂದು ಕಾಯುತ್ತಿದ್ದಾರೆ. ನನಗೂ ಸಹ ಸಲ್ಮಾನ್ ಖಾನ್ ಜೊತೆ ನಟಿಸುವ ಆಸೆ ಇದೆ. ಆದರೆ ಸೂಕ್ತ ಚಿತ್ರಕತೆ ಸಿನಿಮಾ ಸಿಕ್ಕರೆ ಖಂಡಿತಾ ನಟಿಸುತ್ತೇವೆ. ನಾನು ‘ಹಮ್ ದಿಲ್ ದೆ ಚುಕೆ ಸನಮ್’ ಚಿತ್ರದ ದೊಡ್ಡ ಅಭಿಮಾನಿ. ಇತ್ತೀಚೆಗೆ ನನಗೆ ಯಾವತ್ತೂ ಅಂತಹ ಅವಕಾಶ ಬಂದಿಲ್ಲ, ಆದರೆ ಅವರ ಜೊತೆ ಸಿನಿಮಾ ಮಾಡಲು ನನಗಿಷ್ಟ’ ಎಂದು ಅವರು ಹೇಳಿದ್ದಾರೆ.
ಸದ್ಯ ದೀಪಿಕಾ ಪಡುಕೋಣೆ ತಮ್ಮ ಬಹುನಿರೀಕ್ಷಿತ ಚಿತ್ರ ‘ಛಪಾಕ್’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರವನ್ನು ಮೇಘನಾ ಗುಲ್ಜಾರ್ ನಿರ್ದೇಶನ ಮಾಡಿದ್ದು, ಇದರಲ್ಲಿ ವಿಕ್ರಮ್ ಮಸ್ಸೆ ನಟಿಸಿದ್ದಾರೆ. ಚಿತ್ರ ಜನವರಿ 10ರಂದು ಬಿಡುಗಡೆಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


