ಬಾಲಿವುಡ್ ನಟ ಅನುಪಮ್ ಖೇರ್ ತಾಯಿ, ಕುಟುಂಬ ಸದಸ್ಯರಿಗೆ ಕೊರೋನಾ!
ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರ ತಾಯಿ ದುಲಾರಿ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ. ಈ ಕುರಿತು ಅನುಪಮ್ ಖೇರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಧ್ಯ ನಟನ ತಾಯಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರ ತಾಯಿ ದುಲಾರಿ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ. ಈ ಕುರಿತು ಅನುಪಮ್ ಖೇರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಧ್ಯ ನಟನ ತಾಯಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದಲ್ಲದೆ ಖೇರ್ ಅವರ ಸಹೋದರ, ರಾಜು ಖೇರ್, ಅವರ ಅತ್ತಿಗೆ ಮತ್ತು ಸೋದರ ಸೊಸೆ ಸಹ ಕೊರೋನಾ ಸೋಂಕಿಗೆ ತುತ್ತಾಗಿದ್ದು ನಟ ಖೇರ್ ಅವರಿಗೆ ಮಾತ್ರ ಕೊರೋನಾ ನೆಗೆಟಿವ್ ವರದಿ ಬಂದಿದೆ.
"ನನ್ನ ತಾಯಿ ದುಲಾರಿ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ನಾವು ಅವರನ್ನು ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ನನ್ನ ಸಹೋದರ, ಭಭಿ ಮತ್ತು ಸೋದರ ಸೊಸೆ ಸಹ ಕೋವಿಡ್ ಗೆ ಪಾಸಿಟಿವಿ ವರದಿ ಪಡೆದಿದ್ದಾರೆ. ನಾನೂ ಸಹ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು ನನಗೆ ಸೋಂಕು ತಗುಲಿಲ್ಲ. " ಖೇರ್ ಟ್ವೀಟ್ ನಲ್ಲಿ ಹೇಳಿದ್ದಾರೆ.
ಏತನ್ಮಧ್ಯೆ, ಶನಿವಾರ, ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಅವರಿಗೆ ಕೊರೊಣಾವೈರಸ್ ತಗುಲಿರುವ ವರದಿಯಾಗಿದೆ. ತಂದೆ ಮತ್ತು ಮಗಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಹೊಂದುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


