ಬಾಲಿವುಡ್ ನಟಿ ಸಾರಾ ಅಲಿ ಖಾನ್ ಕಾರು ಚಾಲಕನಿಗೆ ಕೊರೋನಾ ಸೋಂಕು
ಬಾಲಿವುಡ್ ನಟಿ ಸಾರಾ ಅಲಿ ಖಾನ್ ಅವರ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಾರಾ ಮತ್ತು ಅವರ ಕುಟುಂಬ ಸದಸ್ಯರು ಕೋವಿಡ್–19 ಪರೀಕ್ಷೆ ಮಾಡಿಸಿಕೊಂಡಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ.

ಬಾಲಿವುಡ್ ನಟಿ ಸಾರಾ ಅಲಿ ಖಾನ್ ಅವರ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಾರಾ ಮತ್ತು ಅವರ ಕುಟುಂಬ ಸದಸ್ಯರು ಕೋವಿಡ್–19 ಪರೀಕ್ಷೆ ಮಾಡಿಸಿಕೊಂಡಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ. ಖುದ್ದು ನಟಿಯೇ ಸೋಮವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಸಾರಾ ಅಲಿ ಖಾನ್ ಅವರ ಡ್ರೈವರ್‌ಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಸ್ವತಃ ಈ ವಿಚಾರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ ಸಾರಾ. 'ನನ್ನ ಚಾಲಕರೊಬ್ಬರಿಗೆ ಕೊರೊನಾ ಪಾಸಿಟಿವ್ ಆಗಿದೆ. ಸದ್ಯ ಅವರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕಳಿಸಲಾಗಿದೆ.
ನನ್ನ ಕುಟುಂಬದ ಸದಸ್ಯರು ಮತ್ತು ಇತರೆ ಸಿಬ್ಬಂದಿಗಳಿಗೂ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಎಲ್ಲರ ವರದಿಯೂ ನೆಗೆಟಿವ್ ಆಗಿದೆ. ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ನಾವು ತೆಗೆದುಕೊಳ್ಳಲಿದ್ದೇವೆ. ಸೂಕ್ತ ರೀತಿಯಲ್ಲಿ ನಮಗೆ ಸಹಾಯ ಮಾಡಿದ ಮತ್ತು ಸೂಚನೆಗಳನ್ನು ನೀಡಿದ ಬಿಎಂಸಿಗೆ ಧನ್ಯವಾದಗಳು' ಎಂದು ಸಾರಾ ಹೇಳಿದ್ದಾರೆ.
ಇತ್ತೀಚೆಗೆ ಸಾರಾ ಅಲಿಖಾನ್ ಮತ್ತು ಅವರ ಸಹೋದರ ಇಬ್ರಾಹಿಂ ಇಬ್ಬರು ತಂದೆ ಸೈಫ್ ಅಲಿ ಖಾನ್ ಮನೆಗೆ ಭೇಟಿ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


