ಕೊರೋನಾ ಸೋಂಕು ದೃಢ: ಐಶ್ವರ್ಯಾ ರೈ, ಪುತ್ರಿ ಆರಾಧ್ಯ ಆಸ್ಪತ್ರೆಗೆ ದಾಖಲು
ಇತ್ತೀಚೆಗಷ್ಟೇ ಕೊರೋನಾ ಸೋಂಕು ದೃಢಪಟ್ಟಿದ್ದ ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಅವರ ಪುತ್ರಿ ಆರಾಧ್ಯ ಬಚ್ಚನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ: ಇತ್ತೀಚೆಗಷ್ಟೇ ಕೊರೋನಾ ಸೋಂಕು ದೃಢಪಟ್ಟಿದ್ದ ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಅವರ ಪುತ್ರಿ ಆರಾಧ್ಯ ಬಚ್ಚನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರು ಮಗಳು ಆರಾಧ್ಯಾ ಮುಂಬೈ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೋನಾ ವೈರಸ್ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರು ಹೋಮ್ ಕ್ವಾರಂಟೈನ್ ಆಗಿದ್ದರು. ಮೂಲಗಳ ಪ್ರಕಾರ, ಪ್ರಸ್ತುತ ಇಬ್ಬರಿಗೂ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಇದೇ ಕಾರಣಕ್ಕೆ ಇಬ್ಬರನ್ನೂ ನಾನಾವತಿ ಆಸ್ಪತ್ರೆ ದಾಖಲಿಸಲಾಗಿದೆ.
ಐಶ್ವರ್ಯಾ ರೈ ಪತಿ, ನಟ ಅಭಿಷೇಕ್ ಬಚ್ಚನ್ ಮತ್ತು ಮಾವ ಅಮಿತಾಬ್ ಬಚ್ಚನ್ ಈಗಾಗಲೇ ನಾನಾವತಿ ಆಸ್ಪತ್ರೆಯಲ್ಲಿ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಾರೆ.
ಜುಲೈ 12ರಂದು ಟ್ವೀಟ್ ಮಾಡಿದ್ದ ಅಭಿಷೇಕ್ ಬಚ್ಚನ್, 'ಐಶ್ವರ್ಯ ಮತ್ತು ಆರಾಧ್ಯ ಇಬ್ಬರಿಗೂ ಕೋವಿಡ್–19 ದೃಢಪಟ್ಟಿದೆ. ಅವರು ಮನೆಯಲ್ಲಿಯೇ ಕ್ವಾರಂಟೈನ್ ಆಗಲಿದ್ದಾರೆ. ನನ್ನ ತಾಯಿಗೆ ಸೋಂಕು ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ವೈದ್ಯರ ಸಲಹೆ ಮೇರೆ ನಾನು ಮತ್ತು ನನ್ನ ತಂದೆ ಆಸ್ಪತ್ರೆಯಲ್ಲಿಯೇ ಇದ್ದೇವೆ' ಎಂದಿದ್ದರು.
ಅಮಿತಾಬ್ ಬಚ್ಚನ್ ಇತ್ತೀಚೆಗೆ ಸಾಮಾಜಿಕ ಮಾಧ್ಯಮದ ಮೂಲಕ ಎಲ್ಲ ಅಭಿಮಾನಿಗಳ ಪ್ರಾರ್ಥನೆಗೆ ಧನ್ಯವಾದ ಅರ್ಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


