ಬಾಲಿವುಡ್

ಸ್ವಜನಪಕ್ಷಪಾತವು ನನ್ನ ವೃತ್ತಿಯಲ್ಲಿ ಬರಲು ಬಿಡುವುದಿಲ್ಲ: ವಿದ್ಯಾ ಬಾಲನ್

ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರು ತಮ್ಮ ವೃತ್ತಿಯಲ್ಲಿ ಸ್ವಜನಪಕ್ಷಪಾತವನ್ನು ಎಂದಿಗೂ ಬರಲು ಬಿಡುವುದಿಲ್ಲ ಎಂದು ಹೇಳಿದ್ದಾ

ಸ್ವಜನಪಕ್ಷಪಾತವು ನನ್ನ ವೃತ್ತಿಯಲ್ಲಿ ಬರಲು ಬಿಡುವುದಿಲ್ಲ: ವಿದ್ಯಾ ಬಾಲನ್
ವಿದ್ಯಾ ಬಾಲನ್
Published On :

ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರು ತಮ್ಮ ವೃತ್ತಿಯಲ್ಲಿ ಸ್ವಜನಪಕ್ಷಪಾತವನ್ನು ಎಂದಿಗೂ ಬರಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಆರೋಪದ ನಂತರ ಸಾಮಾಜಿಕ ತಾಣದಲ್ಲಿ ಈ ವಿಷಯದ ಬಗ್ಗೆ ಚರ್ಚೆಯಾಗಿದೆ. ಚಲನಚಿತ್ರೋದ್ಯಮಕ್ಕೆ ಸಂಬಂಧಿಸಿದವರು ಸೇರಿದಂತೆ ಸಾಮಾನ್ಯ ಜನರು ಸ್ವಜನಪಕ್ಷಪಾತ ಬಗ್ಗೆ ವಾದಿಸುತ್ತಿದ್ದಾರೆ. ಈ ಮಧ್ಯೆ ವಿದ್ಯಾ ಬಾಲನ್ ಕೂಡ ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

“ನಾನು ಕೂಡ ಈ ಉದ್ಯಮದಲ್ಲಿ ಅನೇಕ ಏರಿಳಿತಗಳನ್ನು ನೋಡಿದ್ದೇನೆ. ಎಲ್ಲಾ ರೀತಿಯ ಅನುಭವಗಳನ್ನು ಕಂಡಿದ್ದೇನೆ. ಸ್ವಜನಪಕ್ಷಪಾತವಿಲ್ಲ ಎಂದು ನಾನು ಹೇಳುವುದಿಲ್ಲ, ಆದರೆ ನನ್ನ ವೃತ್ತಿಜೀವನದಲ್ಲಿ ಅದನ್ನು ಬರಲು ನಾನು ಬಿಡಲಿಲ್ಲ” ಎಂದು ತಿಳಿಸಿದ್ದಾರೆ. 

ವಿದ್ಯಾ ಪ್ರಸ್ತುತ ಶಕುಂತಲಾ ದೇವಿ ಚಿತ್ರದಲ್ಲಿ ನಟಿಸಿದ್ದು ಸುದ್ದಿಯಲ್ಲಿದ್ದಾರೆ. ಈ ಚಿತ್ರದಲ್ಲಿ ಅವರು ಶ್ರೇಷ್ಠ ಗಣಿತಜ್ಞ ಶಕುಂತಲಾ ದೇವಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರವು ತಿಂಗಳ ಕೊನೆಯಲ್ಲಿ ಒಟಿಟಿ ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.