ಕೊರೋನಾ ನೆಗೆಟಿವ್ ಬಂದಿಲ್ಲ, ಇನ್ನೂ ಪಾಸಿಟಿವ್ ನಲ್ಲಿಯೇ ಇದ್ದೇನೆ: ಬಿಗ್ ಬಿ ಸ್ಪಷ್ಟನೆ
ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಹೊಸದಾಗಿ ನಡೆಸಲಾದ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂಬ ಮಾಧ್ಯಮಗಳ ವರದಿಗಳನ್ನು ಅವರು ಖಂಡಿಸಿದ್ದಾರೆ.

ಮುಂಬೈ: ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಹೊಸದಾಗಿ ನಡೆಸಲಾದ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂಬ ಮಾಧ್ಯಮಗಳ ವರದಿಗಳನ್ನು ಅವರು ಖಂಡಿಸಿದ್ದಾರೆ.
ತಾವು ಇನ್ನೂ ಮುಂಬೈ ನಾನಾವತಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ಬಿಗ್ ಬಿ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಕೊರೋನಾ ಸೋಂಕಿನಿಂದ ಬಳಲುತ್ತಿರುವ ಅಮಿತಾಬ್ ಬಚ್ಚನ್, ಹೊಸದಾಗಿ ನಡೆಸಲಾದ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದೆ ಎಂದು ಮಾಧ್ಯಮಗಳಲ್ಲಿ ಬಿತ್ತರಿಸಿರುವ ಸುದ್ದಿ ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಇಂತಹ ವರದಿಗಳನ್ನು ಪ್ರಸಾರ ಮಾಡುವುದು ಮಾಧ್ಯಮಗಳಿಗೆ ಶೋಭೆ ತರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ತಾವೂ ಇನ್ನೂ ಕೊರೋನಾ ಪಾಸಿಟಿವ್ ನಿಂದಾಗಿ ಬಳಲುತ್ತಿರುವುದಾಗಿ ಅಮಿತಾಬ್ ಬಚ್ಚನ್ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿರುವ ಸುದ್ದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ, ಹೊಣೆಗೇಡಿ ಸುದ್ದಿಗಳನ್ನು ಬಿತ್ತರಿಸುವುದು ಸರಿಯಲ್ಲ ಎಂದು ಮಾಧ್ಯಮಗಳಿಗೆ ಕಿವಿ ಮಾತು ಹೇಳಿದ್ದಾರೆ. ಆದರೆ ತಮ್ಮ ನೆಚ್ಚಿನ ನಟನ ಆರೋಗ್ಯ ಸುಧಾರಿಸಲಿ ಎಂದು ಅವರ ಅಭಿಮಾನಿಗಳು ಪೂಜೆ, ಹೋಮ ಮತ್ತಿತರ ಕೈಂಕರ್ಯಗಳನ್ನು ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


