ಬಾಲಿವುಡ್

ಕೊರೋನಾದಿಂದ ನಟಿ ಐಶ್ವರ್ಯಾ, ಪುತ್ರಿ ಆರಾಧ್ಯ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೋವಿಡ್-19 ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಹಾಗೂ ಪುತ್ರಿ ಆರಾಧ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೊರೋನಾದಿಂದ ನಟಿ ಐಶ್ವರ್ಯಾ, ಪುತ್ರಿ ಆರಾಧ್ಯ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಆರಾಧ್ಯ, ಐಶ್ವರ್ಯ ರೈ
Published On :

ಮುಂಬೈ: ಕೋವಿಡ್-19 ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಹಾಗೂ ಪುತ್ರಿ ಆರಾಧ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ತಾಯಿ ಹಾಗೂ ಮಗಳಿಗೆ ನೆಗೆಟಿವ್ ವರದಿ ಬಂದಿದ್ದು, ಐಶ್ವರ್ಯಾ ರೈ ಪತಿ ಅಭಿಷೇಕ್ ಬಚ್ಚನ್ ಹಾಗೂ ಮಾವ ಅಮಿತಾಭ್ ಬಚ್ಚನ್ ಇನ್ನೂ ಆಸ್ಪತ್ರೆಯಲ್ಲಿಯೇ ಇದ್ದಾರೆ. ಈ ತಿಂಗಳ ಆರಂಭದಲ್ಲಿ ಎಲ್ಲರಿಗೂ ಕೊರೋನಾ ಸೋಂಕು ತಗುಲಿತ್ತು.

ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಅಭಿಷೇಕ್‌, 'ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗೆ ಧನ್ಯವಾದಗಳು. ಐಶ್ವರ್ಯಾ ಮತ್ತು ಆರಾಧ್ಯ ಗುಣಮುಖರಾಗಿದ್ದಾರೆ.ಅವರಿಬ್ಬರ ಕೊರೊನಾ ವರದಿ ನೆಗೆಟಿವ್ ಆಗಿದೆ. ಅವರೀಗ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದು, ಮನೆಯಲ್ಲಿದ್ದಾರೆ. ನಾನು ಮತ್ತು ನನ್ನ ತಂದೆ ವೈದ್ಯರ  ಆರೈಕೆಯಲ್ಲಿ ಆಸ್ಪತ್ರೆಯಲ್ಲೇ ಇರಲಿದ್ದೇವೆ' ಎಂದು ಹೇಳಿದ್ದಾರೆ. 

ಜುಲೈ 11 ರಂದು ತಮ್ಮ ನಿವಾಸದಿಂದ ಆಸ್ಪತ್ರೆಗೆ ತೆರಳಿದ ಅಮಿತಾಭ್, ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಐಸೋಲೇಷನ್ ವಾರ್ಡ್ ನಲ್ಲಿ  ಇರುತ್ತೇನೆ ಎಂದು ತಿಳಿಸಿದ್ದರು.

ಮರುದಿನವೇ ಐಶ್ವರ್ಯಾ ರೈ ಮತ್ತು ಪುತ್ರಿ ಆರಾಧ್ಯಗೂ ಕೊರೋನಾ ಇರುವುದು ದೃಢಪಟ್ಟಿತ್ತು.ಆದರೆ, ಅವರನ್ನು ಮನೆಯಲ್ಲಿಯೇ ಕ್ವಾರಂಟೈನ್ ಮಾಡಿ,ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ,ಕೆಲ ದಿನಗಳ ನಂತರ ಐಶ್ವರ್ಯಾ ಆರೋಗ್ಯದಲ್ಲಿ  ವ್ಯತ್ಯಾಸ ಕಂಡುಬಂದಿದ್ದರಿಂದ ಕೂಡಲೇ ಅವರನ್ನು ಮತ್ತು ಆರಾಧ್ಯಳನ್ನು ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅಮ್ಮ-ಮಗಳು ಗುಣಮುಖರಾಗಿ, ಮನೆಗೆ ಮರಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.