ಸುಶಾಂತ್ ಸಿಂಗ್ ತಂದೆಯಿಂದ ರಿಯಾ ಚಕ್ರವರ್ತಿ ವಿರುದ್ಧ ಎಫ್ ಐಆರ್ ದಾಖಲು
ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ಸುಶಾಂತ್ ಸಿಂಗ್ ತಂದೆ ಕೆ ಕೆ ಸಿಂಗ್ ಪಾಟ್ನಾದ ಪೊಲೀಸ್ ಠಾಣೆಯೊಂದರಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.

ಮುಂಬೈ: ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ಸುಶಾಂತ್ ಸಿಂಗ್ ತಂದೆ ಕೆ ಕೆ ಸಿಂಗ್ ಪಾಟ್ನಾದ ಪೊಲೀಸ್ ಠಾಣೆಯೊಂದರಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪಾಟ್ನಾ ಸೆಂಟ್ರಲ್ ವಲಯದ ಇನ್ಸ್ ಪೆಕ್ಟರ್ ಜನರಲ್ ಸಂಜಯ್ ಸಿಂಗ್ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ನಾಲ್ವರು ಪೊಲೀಸರನ್ನೊಳಗೊಂಡ ತಂಡವನ್ನು ಮುಂಬೈಗೆ ಕಳುಹಿಸಲಾಗುವುದು, ಈ ತಂಡ ಮುಂಬೈ ಪೊಲೀಸರಿಂದ ಕೇಸ್ ಡೈರಿ ಮತ್ತಿತರ ಪ್ರಮುಖ ದಾಖಲೆಗಳನ್ನು ಸಂಗ್ರಹಿಸಲಿದೆ ಎಂದು ಸಿಂಗ್ ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಯಬೇಕೆಂದು ಒತ್ತಾಯಿಸಿದ ಪೋಸ್ಟ್ ವೊಂದನ್ನು ಗೃಹ ಸಚಿವ ಅಮಿತ್ ಶಾ ಅವರಿಗೆ ರಿಯಾ ಚಕ್ರವರ್ತಿ ಟ್ಯಾಗ್ ಮಾಡಿದ್ದರು.
ಮುಂಬೈನ ಬಾಂದ್ರಾದಲ್ಲಿ ಜೂನ್ 14 ರಂದು ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದರು. ಈ ಸಂಬಂಧ ಇಲ್ಲಿಯವರೆಗೂ
ರಿಯಾ ಚಕ್ರವರ್ತಿ ಸೇರಿದಂತೆ ಸುಮಾರು 40 ಜನರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


