ಸುಶಾಂತ್ ಸಿಂಗ್ ರಜಪೂತ್ ಪ್ರಕರಣ: ತನಿಖೆ ವರ್ಗಾವಣೆ ಕೋರಿ ನಟಿ ರಿಯಾ ಚಕ್ರವರ್ತಿ 'ಸುಪ್ರೀಂ'ಗೆ ಮೊರೆ
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದಲ್ಲಿ ತನ್ನ ವಿರುದ್ಧ ಪಾಟ್ನಾದಲ್ಲಿದಾಖಲಾದ ಎಫ್ಐಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಬುಧವಾರ ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದಲ್ಲಿ ತನ್ನ ವಿರುದ್ಧ ಪಾಟ್ನಾದಲ್ಲಿ ದಾಖಲಾದ ಎಫ್ಐಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಬುಧವಾರ ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.
ರಜಪೂತ್ ಆತ್ಮಹತ್ಯೆ ಮಾಡಿಕೊಳ್ಲಲು ಸಹಕರಿಸಿದ್ದಾರೆ ಎಂದು ಆರೋಪಿಸಿ ನಟನ ತಂದೆ ಕೆ.ಕೆ.ಸಿಂಗ್ ಅವರು ಚಕ್ರವರ್ತಿ ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ ಇತರ ಆರು ಜನರ ವಿರುದ್ಧ ಪಾಟ್ನಾದಲ್ಲಿ ಪೊಲೀಸ್ ದೂರು ದಾಖಲಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ಪ್ರಕರಣವನ್ನು ಪಾಟ್ನಾದಿಂದ ಮುಂಬೈಗೆ ವರ್ಗಾಯಿಸುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದೇನೆ ಎಂದು ರಿಯಾ ಚಕ್ರವರ್ತಿ ಪರ ವಕೀಲ ಸತೀಶ್ ಮನೇಶಿಂದೆ ಹೇಳಿದ್ದಾರೆ. ತನ್ನ ಅರ್ಜಿಯಲ್ಲಿ,ನಟಿ ಬಿಹಾರ ಪೊಲೀಸರು ರಜಪೂತ್ ಅವರ ತಂದೆ ಸಲ್ಲಿಸಿದ ಎಫ್ಐಆರ್ ಮೇಲಿನ ತನಿಖೆಯನ್ನು ತಡೆಹಿಡಿಯಲು ಕೋರಿದ್ದಾರೆ.
34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14 ರಂದು ಮುಂಬೈನ ಉಪನಗರ ಬಾಂದ್ರಾದಲ್ಲಿರುವ ತನ್ನ ಅಪಾರ್ಟ್ಮೆಂಟ್ ನ ಚಾವಣಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


