ಬಾಲಿವುಡ್

ಬಾಲಿವುಡ್ ದಂತಕತೆ, ಖ್ಯಾತ ನಿರ್ದೇಶಕ ಬಸು ಚಟರ್ಜಿ ವಿಧಿವಶ

ಬಾಲಿವುಡ್ ದಂತಕಥೆ ಖ್ಯಾತ ನಿರ್ದೇಶಕ ಬಸು ಚಟರ್ಜಿ (93ವರ್ಷ) ಗುರುವಾರ ವಿಧಿವಶರಾಗಿದ್ದಾರೆ. ಇಂದು ಬೆಳಗ್ಗೆ ಶಾಂತವಾಗಿ ಅವರು ತಮ್ಮ ಇಹಲೋಕದ ಪ್ರಯಾಣ ಮುಗಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು

ಬಾಲಿವುಡ್ ದಂತಕತೆ, ಖ್ಯಾತ ನಿರ್ದೇಶಕ ಬಸು ಚಟರ್ಜಿ ವಿಧಿವಶ
ಬಸು ಚಟರ್ಜಿ
Published On :

ಮುಂಬಯಿ: ಬಾಲಿವುಡ್  ದಂತಕಥೆ ಖ್ಯಾತ ನಿರ್ದೇಶಕ ಬಸು ಚಟರ್ಜಿ (93ವರ್ಷ) ಗುರುವಾರ ವಿಧಿವಶರಾಗಿದ್ದಾರೆ.

ಇಂದು ಬೆಳಗ್ಗೆ ಶಾಂತವಾಗಿ ಅವರು ತಮ್ಮ ಇಹಲೋಕದ ಪ್ರಯಾಣ ಮುಗಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು.

ರಜನಿಗಂಧ, ಚೋಟಿ ಸಿ ಬಾತ್, ಖಟ್ಟಾ ಮೀಠಾ, ಬಾತೋನ್ ಬಾತೋನ್ ಮೈನ್, ಸೌಕೀನ್ ಸೇರಿದಂತೆ ಹಲವಾರು ಕ್ಲಾಸಿಕ್ ಚಿತ್ರಗಳ ನಿರ್ದೇಶಕರಾಗಿ ಹೆಸರಾಗಿದ್ದವರು ಬಸು ಚಟರ್ಜಿ.

ಖ್ಯಾತ ನಿರ್ದೇಶಕ ಬಸು ಚಟರ್ಜಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಐಎಫ್ ಟಿಡಿಎ ಅಧ್ಯಕ್ಷ ಅಶೋಕೆ ಪಂಡಿತ್, ಇಂದು ಮಧ್ಯಾಹ್ನ 2ಗಂಟೆಗೆ ಮುಂಬೈನ ಸಾಂತಾ ಕ್ರೂಝ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.